Friday, July 11, 2025

ಕಳ್ಳ ಭಟ್ಟಿ ತಯಾರಿ ಅಡ್ಡೆಗೆ ದಾಳಿ: ಆರೋಪಿಗಳು ವಶಕ್ಕೆ

ಬಂಟ್ವಾಳ: ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಶೈಲಜಾ ಕೋಟೆ ಅವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ಅವರ ನೇತೃತ್ವದಲ್ಲಿ ಬಂಟ್ವಾಳ ಉಪ ವಿಭಾಗದ ಉಪ ಅಧೀಕ್ಷಕರು ಗೀತಾ ಅವರ ಮಾರ್ಗದರ್ಶನದಂತೆ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ವಿಜಯ್ ಕುಮಾರ್,  ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಅಂಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಕ್ರಿಸ್ಟನ್ ಡಿಸೋಜ ರವರ ಮನೆಯ ಹಿಂಭಾಗದಲ್ಲಿ 1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತು ಪಡಿಸಲಾಯಿತು.

ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣವನ್ನು ಜಿಲ್ಲಾ ತಂಡದ ಅಬಕಾರಿ ಉಪ ನಿರೀಕ್ಷಕ ಜಗನ್ನಾಥ ನಾಯ್ಕ ರವರು ದಾಖಲಿಸಿದ್ದಾರೆ.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...