Saturday, July 12, 2025

ಕುಟುಂಬದ ಸದಸ್ಯೆಯ ಅಂತ್ಯಸಂಸ್ಕಾರ ಮಾಡಿದಷ್ಟು ಹೃದಯ ಭಾರವಾಗಿದೆ: ಭಾವುಕರಾಗಿ ನುಡಿದ ಅಧಿಕಾರಿಗಳು

ಬಂಟ್ವಾಳ: ಕುಟುಂಬ ಸದಸ್ಯೆಯ ಅಂತ್ಯಸಂಸ್ಕಾರದ ಕಾರ್ಯ ಮಾಡಿದಷ್ಟು ಹೃದಯ ಭಾರವಾಗಿದೆ. ಕುಟುಂಬದ ಸದಸ್ಯರು ಅಂತಿಮ ಕಾರ್ಯಕ್ರಮದಲ್ಲಿ ಭಾಗಿಯಾಗಿಲು ಸಾಧ್ಯವಿಲ್ಲದ ಸಂಕಷ್ಟದ ಸ್ಥಿತಿಯಲ್ಲಿ ನಾವೆಲ್ಲಾ ಮುಂದೆ ನಿಂತು ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಉತ್ತಮ ರೀತಿಯಲ್ಲಿ ಮಾಡಿದ್ದೇವೆ ಎಂದು ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಅಧಿಕಾರಿಗಳು ಭಾವುಕರಾಗಿ ಹೇಳಿದರು.
ಜಿಲ್ಲಾಡಳಿತ ಅದೇಶದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನುರಿತ ಸಿಬ್ಬಂದಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ಉತ್ತಮ ರೀತಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.

ಜನರಿಗೆ ಸರಿಯಾದ ಮಾಹಿತಿ ಕೊರತೆಯಿಂದಾಗಿ ಕೊರೊನಾದಿಂದ ಮೃತಪಟ್ಟ ಈ ವೃದ್ದೆಯ ಶವಸಂಸ್ಕಾರಕ್ಕೆ ಜಿಲ್ಲೆಯಲ್ಲಿ ವಿರೋಧಗಳು ವ್ಯಕ್ತವಾದಾಗ ಒಂದಷ್ಟು ಗೊಂದಲಗಳು ಉಂಟಾಗಿತ್ತು. ಮಹಿಳೆಯ ಸ್ವಂತ ಊರು ಬಂಟ್ವಾಳದಲ್ಲೂ ಅಂತ್ಯಸಂಸ್ಕಾರಕ್ಕೆ ವಿರೋಧಗಳು ಕೇಳಿ ಬಂದಾಗ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತನ್ನ ಸ್ವಂತ ಜಾಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಎಂದು ಹೇಳಿದ್ದರು.
ಆದರೆ ಬಳಿಕ ಜಿಲ್ಲಾಡಳಿತ ಜನನಿಬಿಡ ಪ್ರದೇಶದಲ್ಲಿ ಸಂಸ್ಕಾರಕ್ಕೆ ಮುಂದಾಗಿ ಕೈಕುಂಜೆಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇಲ್ಲೂ ಕೂಡ ಸ್ವಲ್ಪ ಮಟ್ಟಿಗೆ ಗೊಂದಲಗಳು ಉಂಟಾದಾಗ ಸ್ವತಃ ಪೋಲೀಸರು ಜನರ ಮನವೊಲಿಸಲು ಮುಂದಾಗಿ ಯಶಸ್ವಿಯಾದರು.


ಕಟ್ಟಿಗೆ ತುಪ್ಪ ತಂದರು
ಜಿಲ್ಲಾಡಳಿತದ ಆದೇಶದಂತೆ ಒಂದೆಡೆ ಜನರ ಮನವೊಲಿಸುವ ಕೆಲಸ ಇನ್ನೊಂದು ಕಡೆ W.H.O.ದ ನಿಯಮಗಳಿಗೆ ಅನುಸಾರವಾಗಿ ಹಿಂದೂ ಸಂಸ್ಕೃತಿಯ ಪ್ರಕಾರ ಈ ವೃದ್ದೆಯ ಶವಸಂಸ್ಕಾರಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಬೇಕಾಗಿತ್ತು. ಆ ಮಧ್ಯ ರಾತ್ರಿಯಲ್ಲಿಯೂ ಶವಸಂಸ್ಕಾರಕ್ಕೆ ಕಟ್ಟಿಗೆ ಹೊಂದಿಸಿಕೊಡುವ ಕೆಲಸ, ತುಪ್ಪ ತಂದುಕೊಡುವ ವ್ಯವಸ್ಥೆ ಪೊಲೀಸ್ ಇಲಾಖೆ ಮಾಡಿದ್ದಾರೆ. ಹಾಗಾಗಿ ಅವರಿಗೆ ಒಂದು ಸಲಾಂ ನೀಡಲೇಬೇಕು.
ಸತ್ತ ವ್ಯಕ್ತಿಗೂ ಅಷ್ಟೇ ಪಾವಿತ್ರ್ಯತೆ ಇದೆ. ಆರೋಗ್ಯ ಇಲಾಖೆಯ ನುರಿತ ಸಿಬ್ಬಂದಿಗಳು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಇವರದು ಸರಕಾರಿ ಕೆಲಸವಾದರೂ ಇದೊಂದು ಪುಣ್ಯದ ಕೆಲಸ ಎಂದು ಮುಂದೆ ನಿಂತು ಮಾಡಿರುವುದನ್ನು ನಾವು ಶ್ಲಾಘಿಸಲೇಬೇಕು.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...