Tuesday, January 27, 2026

ಸೀಲ್ ಅಗಿರುವ ಬಂಟ್ವಾಳದ ಜನತೆಗೆ ನ್ಯಾಯ ಬೆಲೆ ಅಂಗಡಿ ಬದಲಾವಣೆ : ತಹಶೀಲ್ದಾರ್ ರಶ್ಮಿ ಎಸ್.ಆರ್.

ಬಂಟ್ವಾಳ: ಬಂಟ್ವಾಳ ಪೇಟೆ ಸೀಲ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ನಾಲ್ಕು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ಜನರಿಗೆ ಪಡಿತರ ಪಡೆಯುವುದಕ್ಕೆ ತೊಂದರೆಯಾಗಿದ್ದು, ಹೀಗಾಗಿ ತಾಲೂಕು ಆಡಳಿತ ಜನರಿಗೆ ಪಡಿತರ ಪಡೆಯಲು ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಮಾಡಿದೆ.
ಬಂಟ್ವಾಳ ಟಿಎಪಿಸಿಎಂಎಸ್ ಚಿಲ್ಲರೆ ಮಳಿಗೆ ಹಾಗೂ ಲಕ್ಷ್ಮೀ ನಾರಾಯಣ ಕಿಣಿ ಬಂಟ್ವಾಳ ಈ ನ್ಯಾಯಬೆಲೆ ಅಂಗಡಿಯವರು ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಪಡಿತರ ಪಡೆಯಬಹುದಾಗಿದೆ.
ಸುಮಿತ್ರ ಕಿಣಿ ಅರಳಿ ಹಾಗೂ ರವೀಂದ್ರ ಪ್ರಭು ಅಮ್ಟಾಡಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವವರು ಲೊರೆಟ್ಟೊ ಖಾಸಗಿ ಹಿ.ಪ್ರಾ.ಶಾಲೆಯಲ್ಲಿ ಪಡಿತರ ಪಡೆಯುವಂತೆ ಬಂಟ್ವಾಳ ತಹಶೀಲ್ದಾರ್ ಅವರು ತಿಳಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...