Thursday, January 29, 2026

ಲಾಕ್‍ಡೌನ್: ಬೋಳಂಗಡಿ ಎಂ.ಎಚ್. ಸ್ಟೋರ್ ಮಾಲಕನಿಂದ ತರಕಾರಿ ಕಿಟ್‍ಗಳ ವಿತರಣೆ

ಬಂಟ್ವಾಳ: ಕೊರೋನ ವೈರಸ್ ಹಬ್ಬುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದ ಸಂಕಷ್ಟಲ್ಲಿರುವ ಸರ್ವ ಧರ್ಮಗಳ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಾಲೂಕಿನ ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿರುವ ಎಂ.ಎಚ್. ಸ್ಟೋರ್ ಮಾಲಕ ಎಂ.ಎಚ್.ಮುಸ್ತಫ ಎಂಬವರು ತರಕಾರಿ ಕಿಟ್‍ಗಳನ್ನು ವಿತರಿಸಿದ್ದಾರೆ.

ಬೋಳಂಗಡಿ ಮತ್ತು ಬೊಂಡಾಲ ಪರಿಸರದ ಸರ್ವ ಧರ್ಮಗಳ 325 ಕುಟುಂಬಗಳಿಗೆ ತಲಾ 300 ರೂಪಾಯಿಯ ತರಕಾರಿಗಳಿರುವ ಕಿಟ್‍ಗಳನ್ನು ವಿತರಿಸಿದ್ದಾರೆ. ಕಿಟ್‍ನಲ್ಲಿ ಆಲುಗೆಡ್ಡೆ, ಟೊಮೆಟೊ, ಸೌತೆ, ಮೆಣಸು, ಶುಂಠಿ, ಕ್ಯಾರೆಟ್, ಬೀಟ್‍ರೋಟ್, ಮುಳ್ಳುಸೌತೆ, ಕೊತಂಬರಿ ಸೊಪ್ಪು, ಸುರ್ಮಾಗೆಡ್ಡೆ ಸಹಿತ 9 ಕೆ.ಜಿ. ತರಕಾರಿಗಳು ಕಿಟ್‍ನಲ್ಲಿ ಇವೆ.

ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ವಿವಿಧ ಸಂಘ ಸಂಸ್ಥೆಗಳು ಅಕ್ಕಿ ಸಹಿತ ದಿನಸಿ ಸಾಮಗ್ರಿಗಳನ್ನು ಈಗಾಗಲೇ ವಿತರಿಸಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅವರವರ ಕೈಲಾದಷ್ಟು ಸ್ಪಂದಿಸುವುದು ಪುಣ್ಯದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬೋಳಂಗಡಿ ಮತ್ತು ಬೊಂಡಾಲ ಪರಿಸರದ ಮುಸ್ಲಿಮ್, ಹಿಂದೂ, ಕ್ರಿಶ್ಚಿಯನ್ ಧರ್ಮಗಳ 325 ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ತರಕಾರಿ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಎಂ.ಎಚ್.ಸ್ಟೋರ್ ಮಾಲಕ ಮುಸ್ತಫ ತಿಳಿಸಿದ್ದಾರೆ.

ವಿವಿಧ ಸಾಮಾಜಿಕ ಕೆಲಸಗಳಲ್ಲಿ ಗುರುತಿಸಿಕೊಂಡಿರುವ ಮುಸ್ತಫ ಅವರು ಪತ್ರಿಕಾ ವಿತರಕರೂ ಆಗಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...