Thursday, July 10, 2025

ಸ್ಥಳೀಯರಿಗೆ ತೊಂದರೆ ಯಾಗದ ರೀತಿಯಲ್ಲಿ ಕಾಮಗಾರಿ ನಡೆಸಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಬೈಪಾಸು ಬಳಿ ರಸ್ತೆ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಬಿ.ಸಿ.ರೋಡು ಮತ್ತು ಪಾಣೆಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ತುಂಡಾಗಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. ನಿನ್ನೆ ಸಂಜೆಯಿಂದ ದುರಸ್ತಿ ಕಾರ್ಯ ನಡೆಯುತ್ತಿದ್ದು ಈ ದಿನ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳ್ಳಿಪ್ಪಾಡಿ ಬೇಟಿ ನೀಡಿ ಕೊಳವೆ ಶೀಘ್ರ ದುರಸ್ತಿಗೊಳಿಸಿ ನೀರು ಸರಬರಾಜು ವ್ಯವಸ್ಥೆ ಗೊಳಿಸುವಂತೆ ಸೂಚಿಸಿದರು.

ಇಂತಹ ಪ್ರದೇಶದಲ್ಲಿ ತಡೆಗೋಡೆ ಹಾಗೂ ಚರಂಡಿ ಕಾಮಗಾರಿ ನಡೆಸಿ ಸ್ಥಳೀಯರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಸ್ಥಳೀಯ ಪುರಸಭೆಯ ಸದಸ್ಯ ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ ಟೈಲರ್, ಅರ್ಕಮೆ ನರಸಿಂಹ ಮಯ್ಯ, ಸ್ಥಳೀಯರು ರಸ್ತೆ ಕಾಮಗಾರಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

More from the blog

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...

ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ತೊಂದರೆ : ಸಮಸ್ಯೆ ಬಗೆಹರಿಸಲು ಬಿ.ಎಂ.ಎಸ್ ಮನವಿ 

ಬಂಟ್ವಾಳ: ರಾಜ್ಯ ಸರಕಾರವು ಸ್ಪಷ್ಟ ಕಾನೂನು ರೂಪಿಸದ ಪರಿಣಾಮ ಪ್ರಸ್ತುತ ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ಪೋಷಣೆ ಕಷ್ಟವಾಗಿದೆ. ಸಾಲದ ಕಂತು ಪಾವತಿಸುವುದು ಕೂಡ ಸವಾಲಾಗಿದ್ದು, ಶಾಲಾರಂಭದಲ್ಲೇ ಇಂತಹ ಸಮಸ್ಯೆಯಿಂದ...

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...