Wednesday, July 9, 2025

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಗ್ರಹ

ಬಂಟ್ವಾಳ: ಇಲ್ಲಿನ ಪುರಸಬಾ ವ್ಯಾಪ್ತಿಯ ಬಂಟ್ವಾಳ ಕಸಬಾ ಗ್ರಾಮದ ಬಂಟ್ವಾಳ ಪೇಟೆಯ ನಿವಾಸಿಗಳ ಬದುಕು ಸೀಲ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನಲೆಯಲ್ಲಿ ಆ ನಿವಾಸಿಗಳ ಕಟ್ಟಡ ಮತ್ತು ಮನೆ ತೆರಿಗೆ, ವಿದ್ಯುತ್ ಮತ್ತು ನೀರಿನ ಬಿಲ್ ಹಾಗೂ ತ್ಯಾಜ್ಯ ಶುಲ್ಕ ಮನ್ನಾ ಮಾಡುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪುರಸಭೆಯನ್ನು ಆಗ್ರಹಿಸಿದ್ದಾರೆ.
ಈ ಪ್ರದೇಶದಲ್ಲಿ ಕೊರೊನಾ ಸೊಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ನಂತರ ಸುಧೀರ್ಘ ದಿನಗಳ ಸೀಲ್ ಡೌನ್ ಮುಂದುವರೆದಿದೆ. ಆದರೆ ಈ ಪ್ರದೇಶದ ಜನರಿಗೆ ಯಾವುದೇ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಇದರಿಂದಾಗಿ ಇಲ್ಲಿನ ಜನರಿಗೆ ದಿನನಿತ್ಯದ ಬದುಕು ನಿರ್ವಹಣೆ ಕಷ್ಟವಾಗಿದ್ದು, ಇಲ್ಲಿನ ನಿವಾಸಿಗಳ ಕಟ್ಟಡ ಮತ್ತು ಮನೆ ತೆರಿಗೆ, ವಿದ್ಯುತ್ ಮತ್ತು ನೀರಿನ ಬಿಲ್ ಹಾಗೂ ತ್ಯಾಜ್ಯ ಶುಲ್ಕ ಮನ್ನಾ ಮಾಡುವ ಮೂಲಕ ಪುರಸಭೆಯ ಇವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಬೇಬಿ ಕುಂದರ್ ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಮಾಜಿ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪೂರಾ ಸಭಾ ಸದಸ್ಯರಾದ ಜನಾರ್ದನ ಚೆಂಡ್ತಿಮರ್,ಗಂಗಾಧರ ಪೂಜಾರಿ ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...