Wednesday, July 9, 2025

ಮಧ್ಯಪ್ರದೇಶದ ಕಾರ್ಮಿಕರನ್ನು ಊರಿಗೆ ಕಳುಹಿಸಿದ ತಾಲೂಕು ಆಡಳಿತ

ಬಂಟ್ವಾಳ: ಕೆಲಸದ ನಿಮಿತ್ತ ಬಂಟ್ವಾಳ ತಾಲೂಕಿನ ವಿವಿಧ ಭಾಗಕ್ಕೆ ಆಗಮಿಸಿದ್ದ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ಬಂಟ್ವಾಳ ತಾಲೂಕಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಮೂಲಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕಳುಹಿಸಲಾಯಿತು. ಅಲ್ಲಿಂದ ರೈಲಿನ ಮೂಲಕ ಊರಿಗೆ ತೆರಳಿದರು.
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರ ನಿರ್ದೇಶನದಂತೆ ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣದಿಂದ 51 ಮಂದಿ ಹಾಗೂ ವಿಟ್ಲದಿಂದ 46 ಮಂದಿಯನ್ನು ಬಸ್ಸಿನ ಮೂಲಕ ಪುತ್ತೂರಿಗೆ ಕಳುಹಿಸಲಾಯಿತು.


ಬಂಟ್ವಾಳ ಗ್ರಾಮಾಂತರ ಸಬ್ ಇನ್ಸ್ ಪೆಕ್ಟರ್ ಪ್ರಸನ್ನ, ನಗರ ಸಬ್ ಇನ್ಸ್ ಪೆಕ್ಟರ್ ಅವಿನಾಶ್, ಬಂಟ್ವಾಳ ತಾಲೂಕು ಕಚೇರಿಯ ಅಧಿಕಾರಿಗಳು, ಸಿಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಪೊಲೀಸರು ಉಪಸ್ಥಿತರಿದ್ದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...