Friday, June 27, 2025

ಸೀಲ್ ಡೌನ್ ಏರಿಯಾದಲ್ಲಿ ಬಿಜೆಪಿ ಮುಖಂಡನ ರಂಪಾಟ: ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ

ಬಂಟ್ವಾಳ: ಸೀಲ್ ಡೌನ್ ಏರಿಯಾದಲ್ಲಿ ಬಿಜೆಪಿ ಮುಖಂಡನ ರಂಪಾಟ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.

ಬಂಟ್ವಾಳ ಪೇಟೆಯಲ್ಲಿ ಸೀಲ್ ಡೌನ್ ವಾಪಸ್ಸು ಪಡೆಯಬೇಕೆಂಬ ಬೇಡಿಕೆ ಇದೆ. ಇದಕ್ಕೂ ಮೊದಲು ನಾನು ಒಂದು ಸಲ ಸೀಲ್ ಡೌನ್ ವ್ಯಾಪ್ತಿಯ ಹೊರಗಡೆ ಸಾಂತ್ವನ ಹೇಳಲು ಹೋಗಿದ್ದೆ ಅದ್ರೆ ಸೀಲ್ ಡೌನ್ ಏರಿಯದೊಳಗೆ ಹೋಗಿಲ್ಲ ಅದ್ರೆ ಅದನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಕಸಬಾ ಗ್ರಾಮದ ಸೀಲ್ ಡೌನ್ ಏರಿಯಾದೊಳಗೆ ಹೋಗಿ ಗಲಾಟೆ ಮಾಡಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿದ್ದರು.

ಅವತ್ತು ನನಗೆ ವಿರೋಧ ವ್ಯಕ್ತಪಡಿಸಿದ ಇವರು ಇವತ್ತು ಸೀಲ್ ಡೌನ್ ಒಳಗೆ ಹೋಗಿ ಗಲಾಟೆ ಮಾಡಿದ್ದು ಸರಿನಾ? ಎಂದು ಅವರು ಪ್ರಶ್ನಿಸಿದರು.

ಅಧಿಕಾರಿಗಳು, ಪೊಲೀಸರ ಮಧ್ಯೆ ಗಲಾಟೆ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ನಾನು ಹೋಗಿರುವ ಸಂದರ್ಭದಲ್ಲಿ ರಾಜಕೀಯ ಮಾಡಿ ನನ್ನ ವಿರುದ್ಧ ಅರೋಪ ಮಾಡಿದವರು ಇವತ್ತು ಏನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಜಿಲ್ಲಾಡಳಿತ ಈ ಬಗ್ಗೆ ಪರಿಶೀಲನೆ ನಡೆಸಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಒತ್ತಾಯಿಸಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...