Thursday, July 3, 2025

ವಿಕಲಚೇತನರಿಗೆ ಸೌಲಭ್ಯ ವಿತರಣೆ

ಬಂಟ್ವಾಳ:  2018-19 ಸಾಲಿನ ಅನಿರ್ಬಂಧಿತ ಅನುದಾನ ಮತ್ತು ಅಧಿಭಾರ ಸುಲ್ಕದಡಿ 3  ಶೇ ಅನುದಾನದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ವಿಕಲಚೇತನರಿಗೆ ಶ್ರವಣ ಸಾಧನ , ವಾಕಿಂಗ್ ಸ್ಟಿಕ್, ಗಾಲಿ ಕುರ್ಚಿ, ನೀರಿನ ಬೆಡ್, ಹೊಲಿಗೆ ಯಂತ್ರ, ವಾಕರ್ ಮತ್ತು ತ್ರಿಚಕ್ರ ಸೈಕಲ್ ವಿತರಣೆ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆಯಿತು.
ಒಟ್ಟು 30 ಮಂದಿ ವಿಕಲ ಚೇತನರಿಗೆ ಈ ಸೌಲಭ್ಯ ಗಳನ್ನು ತಾ.ಪಂ.ಅಧ್ಯಕ್ಷ ಚಂದ್ರ ಹಾಸ ಅವರ ಅಧ್ಯಕ್ಷ ತೆಯಲ್ಲಿ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯ ರಾದ ಎಂ.ಎಸ್.ಮಹಮ್ಮದ್, ಮಮತಾ ಗಟ್ಟಿ, ರವೀಂದ್ರ ಕಂಬಳಿ, ಮಂಜುಳಾ ಮಾದವ ಮಾವೆ, ತುಂಗಪ್ಪ ಬಂಗೇರ, ಜಯಶ್ರೀ ಕೊಡಂದೂರು, ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಸಹಾಯಕ ನಿರ್ದೇಶಕ ಡಿ.ಪ್ರಶಾಂತ್, ಎ.ಒ. ಶಾರದಾ, ಮ್ಯಾನೇಜರ್ ಶಾಂಭವಿ, ವಲಯ ಮೇಲ್ವಿಚಾರಕ ಕುಶಾಲಪ್ಪ ಗೌಡ ಹಾಗೂ ತಾ.ಪಂ.ಸಿಬ್ಬಂದಿ ಗಳು ಉಪಸ್ಥಿತರಿದ್ದರು.

More from the blog

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಮಂಗಳೂರು : ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ : ಆರೋಪಿ ಬಂಧನ..

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...