ಬಂಟ್ವಾಳ: ಕಂದಾಯ ಇಲಾಖೆ ಗ್ರಾಮ ಸಹಾಯಕರ ಹಲವು ಬೇಡಿಕೆಯನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲೆಯ ಗ್ರಾಮ ಸಹಾಯಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಪ್ಪ ಪೂಜಾರಿ ಮಂಗಳೂರು ಹಾಗೂ ಜಿಲ್ಲಾಧ್ಯಕ್ಷ ಪ್ರಕಾಶ್ ಮೂಡಬಿದ್ರೆ ಅವರು ಜಿಲ್ಲಾಧಿಕಾರಿ ಅವರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸಲ್ಲಿಸಲಾಯಿತು.

ಕಂದಾಯ ಇಲಾಖೆಯಲ್ಲಿ 43 ವರ್ಷಗಳಿಂದ ಯಾವುದೇ ಸೇವಾ ಭದ್ರತೆ ಇಲ್ಲದೆ ಸೇವೆ ಸಲ್ಲಿಸಿದ್ದು, ಇದುವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ಡಿ ಗ್ರೂಪ್ ದರ್ಜೆ ನೌಕರರೆಂದು ಪರಿಗಣಿಸಲು ಆದೇಶಿಸಿದೆ. ಈ ಬಗ್ಗೆ ಹಾಗೂ ಇತರ 6 ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಲಾಗಿದೆ.

