Thursday, January 29, 2026

ಬಂಟ್ವಾಳ ತಾಲೂಕಿನಲ್ಲಿ ಮಳೆ ಹಾನಿಗೆ ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಶುಕ್ರವಾರ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಕೃಷಿ ಭೂಮಿ ಸಹಿತ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಘಟನೆ ಸಂಭವಿಸಿದೆ.


ಸಜೀಪನಡು ಗ್ರಾಮದ ಬೊಳಮೆ ಉಮಾವತಿ ಅವರ ಮನೆ ಪೂರ್ಣ ಕುಸಿದಿದ್ದು ಸುಮಾರು 2 ಲಕ್ಷ ನಷ್ಟ ಸಂಭವಿಸಿದೆ.
ಬಾಳೆಪುಣಿಯ ಕಣಂತೂರಿನಲ್ಲಿ ಬಾಬು ಗಟ್ಟಿಯವರ ಗುಡ್ಡ ಕುಸಿದು ನೆರೆ ನೀರು ಕೃಷಿ ತೋಟಗಳಿಗೆ ನುಗ್ಗಿದೆ. ಸಜೀಪಪಡು ಗ್ರಾಮದಲ್ಲಿ ಭತ್ತದ ಗದ್ದೆಗೆ ತೋಡಿನ ನೀರು ನುಗ್ಗಿದೆ.

ಕಸ್ಬಾ ಗ್ರಾಮದ ಫೆಲಿಕ್ಸ್ ಎಂಬವರ ಮನೆಗೆ ಹಾನಿಯಾಗಿ ಸುಮಾರು 50 ಸಾವಿರ ನಷ್ಟ ಸಂಭವಿಸಿದೆ.
ಸಜೀಪ ಮುನ್ನೂರು ಗ್ರಾಮದ ನಂದಾವರ ಆಸಿಫ್ ಎಂಬವರ ಹಾನಿಯಾಗಿ ಸುಮಾರು 50 ಸಾವಿರ ರೂ. ನಷ್ಟ ಸಂಭವಿಸಿದೆ.
ನರಿಕೊಂಬು ಗ್ರಾಮಾದ ಹಮೀದ್ ಎಂಬವರ ಮನೆ ಸಮೀಪ ಗುಡ್ಡ ಜರಿದು ಬಿದ್ದಿದೆ. ಸಜೀಪನಡು ಗ್ರಾಮದ ಸೋಮನಾಥ ಎಂಬವರ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿಯಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...