Wednesday, June 25, 2025

ಬಂಟ್ವಾಳ ಪುರಸಭೆಯ ಆಡಳಿತ ಅಧಿಕಾರಿಯವರಿಗೆ ಮನವಿ ಪತ್ರ

ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ರಮಾನಾಥ ರೈಯವರ ನೇತೃತ್ವದಲ್ಲಿ ಬಂಟ್ವಾಳ ಪುರಸಭೆಯಲ್ಲಿ ಚುನಾಯಿತ ಜನ ಪ್ರತಿನಿಧಿಗಳನ್ನು ಕಡೆಗಣಿಸಿದ್ದು, ಚುನಾಯಿತ ಜನ ಪ್ರತಿನಿಧಿಗಳಿಗೆ ಅಧಿಕಾರವನ್ನು ಕೊಡುವಂತೆ ಹಾಗೂ ಸ್ಥಳಿಯ ಶಾಸಕರು ಕಾಂಗ್ರೆಸ್ ಪಕ್ಷದ ಸದಸ್ಯರ ವಾರ್ಡ್‌ನಲ್ಲಿ ಅಭಿವೃದ್ದಿ ಕಡೆಗನಿಸಿದನ್ನು ವಿರೋದಿಸಿ ಹಾಗೂ ನಿರ್ಮಲ ಬಂಟ್ವಾಳ ಯೋಜನೆಯಡಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಸ್ಥಗಿತ ಗೊಂಡಿದ್ದು ಹಾಗೂ ಕುಡಿಯುವ ನೀರು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿ 2 ತಿಂಗಳು ನೀರಿನ ಬಿಲ್ಲು 90 ರೂಪಾಯಿ ಇದ್ದು ಪುರಸಭೆಯ ಅವ್ಯವಸ್ಥೆಯಿಂದ 2 ತಿಂಗಳ ಕುಡಿಯುವ ನೀರಿನ ಬಿಲ್ಲು 2 ಸಾವಿರದಿಂದ ೩3 ಸಾವಿರಕ್ಕೆ ಏರಿಕೆಯಾದುದರಿಂದ ಸಾರ್ವಜನಿಕರಿಗೆ ತುಂಬಲಾರದ ಹೊರೆಯಾಗಿದೆ. ಇದೆಲ್ಲವನ್ನು ವಿರೋದಿಸಿ ತಕ್ಷಣ ದಿಂದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಂಟ್ವಾಳ ಪುರಸಭೆಯ ಆಡಳಿತ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುಧೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್.ಎಸ್. ಮಹಮ್ಮದ್, ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ವಾಸು ಪುಜಾರಿ ಲೊರೆಟ್ಟೊ, ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ, ಮೊಹಮ್ಮದ್ ನಂದರಬೆಟ್ಟು, ಜೆಸಿಂತಾ ಡಿ. ಸೋಜ, ಗಾಯತ್ರಿ ಪ್ರಕಾಶ್, ಲುಕ್ಮಾನ್, ಮಹಮ್ಮದ್ ಶರಿಫ್, ಅಬೂಬಕ್ಕರ್ ಸಿಧ್ದೀಕ್, ಮುಖಂಡರಾದ ಜಗದೀಶ್ ಕೊಯಿಲ, ಪದ್ಮನಾಭ ರೈ, ಚಿತ್ತರಂಜನ್ ಶೆಟ್ಟಿ, ಮದುಸೂಧನ್ ಶೆನೈ, ಪದ್ಮಸ್ಮಿತ್, ಅಮ್ಮು ಅರಬಿಗುಡ್ಡೆ, ವೆಂಕಪ್ಪ ಪೂಜಾರಿ, ರಪೀಕ್ ಪಲ್ಲಮಜಲೂ, ವಿನೋದ್‌ರಾಜ್ ಕೊಯಿಲ ಉಪಸ್ಥಿತರಿದ್ದರು.

More from the blog

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ- ರಾಜೇಶ್ ಬಿ

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ...