Friday, January 30, 2026

ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೆ.19 ರಂದು ನಿಧನರಾದ ರಾಧಾಕೃಷ್ಣ ಇವರಿಗೆ ಬಂಟ್ವಾಳ ಮಿನಿ ವಿಧಾನ ಸೌಧದಲ್ಲಿ ತಾಲೂಕು ಕಛೇರಿ ಸಿಬ್ಬಂದಿಗಳು ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್.ಆರ್. ರವರು, ಬೇರೆ ಬೇರೆ ತಾಲೂಕಿನಲ್ಲಿ ನಿಷ್ಠಾವಂತರಾಗಿ ಕರ್ತವ್ಯ ಸಲ್ಲಿಸಿದ ಬಂಟ್ವಾಳದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿದ ಇವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದು ಗದ್ಗದಿತರಾಗಿ ಹೇಳಿದರು.


ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ನೌಕರ ಸ್ನೇಹಿಯಾಗಿ ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ರಾಧಾಕೃಷ್ಣರವರ ಅಗಲಿಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದರು.
ಈ ವೇಳೆ ತಾಲೂಕು ಕಛೇರಿ ಸಿಬ್ಬಂದಿಗಳು, ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...