Thursday, June 26, 2025

ಮಿನಿವಿಧಾನಸೌಧದಲ್ಲಿ ಸೋಲಾರ್ ಸೌಕರ್ಯ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ಮಿನಿವಿಧಾನಸೌಧದಲ್ಲಿ ಜನರೇಟರ್ ಇದ್ದರೂ ಯಾವುದೇ ವ್ಯವಸ್ಥೆಗಳಿಲ್ಲದೆ ಸಮಸ್ಯೆ ಉಂಟಾಗುತ್ತಿತ್ತು. ಈಗ ಸೋಲಾರ್ ವ್ಯವಸ್ಥೆ ಅಳವಡಿಸಲಾಗಿದ್ದು, ವಿದ್ಯುತ್ ಕೊರತೆ ಸಮಸ್ಯೆ ಇರುವುದಿಲ್ಲ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಮಿನಿ ವಿಧಾನಸೌಧದಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಯ ಸೌಕರ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಲವೊಂದು ಸಣ್ಣಪುಟ್ಟ ತೊಂದರೆಗಳು ಇಲ್ಲಿದ್ದವು, ವಿದ್ಯುತ್ ಸಮರ್ಪಕ ಪೂರೈಕೆಯಾಗದೆ, ಜನರು ತೊಂದರೆ ಪಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಲಾರ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ ಎಂದವರು ಹೇಳಿದರು. ಇನ್ನು ಜನರಿಗೆ ತೊಂದರೆಯಾಗದೆ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಕರೆಂಟ್ ಇಲ್ಲ ಎಂಬ ದೂರುಗಳು ಇನ್ನು ಬಾರದು ಎಂದು ಶಾಸಕರು ಹೇಳಿದರು. ಉದ್ಘಾಟನೆ ಸಂದರ್ಭ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಬುಡ ಅಧ್ಯಕ್ಷ ದೇವದಾಸ ಶೆಟ್ಟಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಹಸೀಲ್ದಾರ್ ರಶ್ಮಿ ಎಸ್.ಆರ್. ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...