Friday, June 27, 2025

ಬಂಟ್ವಾಳ ನಗರ ಪೋಲೀಸ್ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಚೆಲುವರಾಜ್ ಕರ್ತವ್ಯಕ್ಕೆ ಹಾಜರು

ಬಂಟ್ವಾಳ: ಬಂಟ್ವಾಳ ನಗರ ಪೋಲೀಸ್ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಮೇಲ್ದರ್ಜೆಗೊಂಡ ಬಳಿಕ ಪ್ರಥಮ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಚೆಲುವರಾಜು ಅವರು ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕೋಮುಸೂಕ್ಮ ಹಾಗೂ ಜನಸಂಖ್ಯೆ ಯ ಆಧಾರ ದ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ನ್ನು ಪೋಲೀಸ್ ಇನ್ಸ್ ಪೆಕ್ಟರ್ ಠಾಣೆಯಾಗಿ ಮೇಲ್ದರ್ಜೆಗೇರಿಸುವಂತೆ ಹಲವಾರು ವರ್ಷಗಳಿಂದ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಈ ಬಾರಿ ರಾಜ್ಯದಲ್ಲಿ ಒಟ್ಟು 86 ಸೆನ್ಸಿಟಿವ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ನಗರ , ಉಡುಪಿ ಜಿಲ್ಲೆಯ ಉಡುಪಿ ನಗರ ಹಾಗೂ ಕಾರವಾರ ದಲ್ಲಿ ಭಟ್ಕಳ ಮತ್ತು ಹೊನ್ನಾವರ ಠಾಣೆ ಗಳನ್ನು ಒಳಗೊಂಡಂತೆ ಒಟ್ಟು ರಾಜ್ಯದಲ್ಲಿ 86 ಪೋಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದ್ದಾರೆ.

*ಡಿ.ಸಿ.ಐ.ಬಿ ಇನ್ನಿಲ್ಲ*

ರಾಜ್ಯದ ಎಲ್ಲಾ ಜಿಲ್ಲೆ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿ.ಸಿ.ಐ.ಬಿ ಪೋಲೀಸ್ ಇನ್ಸ್ ಪೆಕ್ಟರ್ ಗಳನ್ನು ಬರ್ಖಾಸ್ತುಗೊಳಿಸಿ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಗಳನ್ನು ಮೇಲ್ದರ್ಜೆಗೊಂಡ ಠಾಣೆಗಳ ಪೋಲೀಸ್ ಇನ್ಸ್ ಪೆಕ್ಟರ್ ಗಳಾಗಿ ವರ್ಗಾವಣೆ ಮಾಡಿ ಸರಕಾರ ಅದೇಶದಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ವೃತ್ತದಲ್ಲಿ ಒಟ್ಟು ನಾಲ್ಕು ಠಾಣೆಗಳು ಒಳಗೊಂಡಿತ್ತು. ಬಂಟ್ವಾಳ ನಗರ , ಗ್ರಾಮಾಂತರ, ವಿಟ್ಲ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಗಳು ಸೇರಿಕೊಂಡಿತ್ತು. ಬಂಟ್ವಾಳ ನಗರ ಪೋಲೀಸ್ ಠಾಣೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಮೆಲ್ದರ್ಜಗೊಂಡ ಬಳಿಕ ಇನ್ಮುಂದೆ ಬಂಟ್ವಾಳ ವೃತ್ತ ಪೋಲೀಸ್ ನಿರೀಕ್ಷರ ಎಂಬುದು ಬದಲಾಗಿ ಗ್ರಾಮಾಂತರ ವೃತ್ತ ಪೋಲೀಸ್ ನಿರೀಕ್ಷಕ ರಾಗಿ ಬದಲಾವಣೆ ಅಗುತ್ತದೆ. ಬಂಟ್ವಾಳ ನಗರ ಠಾಣೆ ಹಾಗೂ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಗಳು ವೃತ್ತದಿಂದ ಹೊರಗುಳಿಯುತ್ತದೆ. ಬಂಟ್ವಾಳ ನಗರ ಠಾಣೆಗೆ ಹೊಸದಾಗಿ ಕರ್ತವ್ಯ ಕ್ಕೆ ಹಾಜರಾದ ಮಂಗಳೂರು ಡಿ.ಸಿ‌.ಐ.ಬಿ ಇನ್ಸ್ ಪೆಕ್ಟರ್ ಆಗಿದ್ದ ಚೆಲುವರಾಜು ಅವರು ಪೋಲೀಸ್ ಇನ್ಸ್ ಪೆಕ್ಟರ್ ಆಗಿಯೂ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಗೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ಮಾಡಲಿದ್ದಾರೆ. ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರು ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೋಲೀಸ್ ಠಾಣೆಗೆ ವೃತ್ತ ನಿರೀಕ್ಷರಾಗಿ ಕರ್ತವ್ಯ ಮಾಡಲಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಚೆಲುವರಾಜು ಅವರ ಮೊಬೈಲ್ ಸಂಖ್ಯೆ 9480805308 ಹಾಗೂ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಮೊಬೈಲ್ ಸಂಖ್ಯೆ 9480805335  ಬಂಟ್ವಾಳ ನಗರ ಠಾಣಾ ಎಸ್.ಐ.ಅಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅವಿನಾಶ್ ಹಾಗೂ ಅಪರಾಧ ವಿಭಾಗದ ಎಸ್‌.ಐ.ಅಗಿ ಕಲೈಮಾರ್ ಅವರು ಕರ್ತವ್ಯದಲ್ಲಿರುತ್ತಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...