Friday, January 30, 2026

ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕ : ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಆಗತ-ಸ್ವಾಗತ ಕರ‍್ಯಕ್ರಮ

 

ಬಂಟ್ವಾಳ:ಫೆ.26ರಂದು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿಗೆ ಹೊಸದಾಗಿ ಸೇರ್ಪಡೆಯಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಆಗತ-ಸ್ವಾಗತ ಕರ‍್ಯಕ್ರಮ ನಡೆಯಿತು.
ನೂತನವಾಗಿ ದಾಖಲಾದ ವಿದ್ಯಾರ್ಥಿಗಳು ಯಜ್ಞ ಕುಂಡಕ್ಕೆ ಹವಿಸ್ಸು ಅರ್ಪಿಸಿ, ಹಿರಿಯರಿಂದ ತಿಲಕಧಾರಣೆ ಮಾಡಿಸಿಕೊಂಡು ಭಾರತಮಾತೆಗೆ ಪುಷ್ಮಾರ್ಚನೆಗೈದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀಯುತ ಪ್ರಭಾಕರ್ ಭಟ್, ಕಲ್ಲಡ್ಕ ಆಗತ ಸ್ವಾಗತವೆಂಬುದು ಹೊಸ ರೀತಿಯ ಹೊಸ ಕಲ್ಪನೆಯ ಕಾರ‍್ಯಕ್ರಮ. ಇದರಿಂದ ನಮ್ಮ ಶಿಕ್ಷಣದ ಮೂಲ ಚಿಂತನೆ, ವಿನೀತತೆ, ಗುರುಹಿರಿಯರಲ್ಲಿ ಗೌರವ ಹಾಗೂ ಪ್ರತಿಷ್ಟೆಯ ಬದುಕು ವಿದ್ಯಾರ್ಥಿಗಳದ್ದಾಗಬೇಕೆಂದು ತಿಳಿಸಿದರು. ಅತಿಥಿಯಾದ ಐಟಿ ಇಂಜಿಯನರ್ ಶ್ರೀ ಸ್ವರೂಪ್ ಪದ್ಮನಾಭ ವಿದ್ಯಾರ್ಥಿಗಳು ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಅದರ ಜೊತೆಗೆ ತಮ್ಮ ಕನಸುಗಳನ್ನು ನನಸಾಗಿಸಬೇಕೆಂದು ಹೇಳಿದರು.ಕಾರ‍್ಯಕ್ರಮದಲ್ಲಿ ಪ್ರಗತಿಪರ ಕೃಷಿಕರಾದ ಶ್ರೀಯುತ ಪದ್ಮನಾಭ ತೆಂಗಿನಮನೆ, ಶ್ರೀಮತಿ ಭವ್ಯ ಸ್ವರೂಪ್, ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀಯುತ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯರಾದ ಶ್ರೀಯುತ ನಾಗೇಶ್ ಕಲ್ಲಡ್ಕ, ಶ್ರೀಮತಿ ಲಕ್ಷಿರಘುರಾಜ್, ಶ್ರೀಮತಿ ಮಲ್ಲಿಕಾ ಶೆಟ್ಟಿ, ಶ್ರೀರಾಮ ಶಿಶುಮಂದಿರದ ವ್ಯವಸ್ಥಾಪಕರಾದ ಶ್ರೀಮತಿ ಸುಧಾ ಕಶೆಕೋಡಿ, ಪ್ರಾಚಾರ್ಯರಾದ ಶ್ರೀಯುತ ವಸಂತ ಬಲ್ಲಾಳ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಭವನೀಶ್ ಅಭ್ಯಾಗತರನ್ನು ಸ್ವಾಗತಿಸಿ, ವೈಷ್ಣವಿ ಕರ‍್ಯಕ್ರಮವನ್ನು ನಿರೂಪಿಸಿ, ಚೈತ್ರಾ ವಂದಿಸಿದರು.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...