Sunday, February 1, 2026

ರೈತ ಮಾಹಿತಿ ಶಿಬಿರ

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ (ಕೋಡಿ ಹಳ್ಳಿ ಬಣ) ಮತ್ತು ಅರುಣ್ ಡಿ’ಸೋಜಾ, ವಿಲ್ಮಾ ಪ್ರಿಯಾ ಅಲ್ಬ್ಕರ್ಕ್ ಇವರು ತಮ್ಮ ನಿವಾಸದಲ್ಲಿ ರೈತರಿಗೆ ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಅಧ್ಯಕ್ಷೆತೆಯನ್ನು ಬಾಂಬಿಲ ಚರ್ಚ್ ನ ಧರ್ಮಗುರುಗಳಾದ ವಂದನೀಯ ರೇl ನಾ ಪೀಟರ್ ಗೋನ್ಸಾಲಿಸ್ ವಹಿಸಿ ಇಂತಹ ಕಾರ್ಯಕ್ರಮ ಮತ್ತಷ್ಟು ಮೂಡಿಬರಲಿ ಎಂದು ಹಾರೈಸೋಣ, ಪಡೆದ ಮಾಹಿತಿಯಿಂದ ನಮ್ಮಲ್ಲಿ ಅನೇಕ ಹೊಸ ಕೃಷಿ ವಿಚಾರದ ಅರಿವು ಮೂಡಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಶ್ರೀ ಮನೋಹರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಇಂತ ರೈತ ಸ್ನೇಹಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ರೈತರು ಆಸಕ್ತಿಯಿಂದ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇಲ್ಲಿನ ವಿಜ್ಞಾನಿ ಡಾl ನವೀನ್ ಬಿ.ಟಿ ಭಾಗವಹಿಸಿ ಮಣ್ಣು ಪರೀಕ್ಷೆ ಮತ್ತು ಅದರ ಮಾದರಿ ಸಂಗ್ರಹಿಸುವ ಕುರಿತು ಮಾಹಿತಿ ನೀಡಿದರು. ಆರ್ಥಿಕ ಸಾಕ್ಷರತಾ ಕೇಂದ್ರ ಅಮೂಲ್ಯ, ಮಂಗಳೂರು ಇಲ್ಲಿನ ಸಮಾಲೋಚಕರಾದ  ಲತೇಶ್.ಬಿ ಮತ್ತು ಕುl ವೈಶಾಲಿ ಭಾಗವಹಿಸಿ, ಆರ್ಥಿಕ ಸಾಕ್ಷರತೆ, ಉಳಿತಾಯ ಭಾರತ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆ ಮತ್ತು ಕೃಷಿ ಸಂಬಂಧಿ ಬ್ಯಾಂಕ್ ಸೇವಾ ಸೌಲಭ್ಯ , ನಗದು ರಹಿತ ವ್ಯವಹಾರದ ಕುರಿತು ಮಾಹಿತಿ ನೀಡಿದರು. ತೋಟಗಾರಿಕ ಇಲಾಖೆ ವತಿಯಿಂದ  ಸೇಸಪ್ಪ ಸಹಾಯಕ ತೋಟಗಾರಿಕಾ ಅಧಿಕಾರಿ ಇಲಾಖೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು , ‌ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ  ಮೋಹಿನಿ,  ನಂದಕುಮಾರ್ ರೈ ಅಧ್ಯಕ್ಷರು, ಬಡಗಬೆಳ್ಳೂರು ವ್ಯವಸಾಯ ಸಹಕಾರಿ ಸಂಘ , ಅಂಬುಜೆ ಗ್ರಾಮ ಪಂಚಾಯತ್ ಸದಸ್ಯ  ರೋನಾಲ್ಡ್ ಡಿ’ಸೋಜಾ , ಪ್ರಗತಿಪರ ಕೃಷಿಕ  ನಿರಂಜನ್ ಶೆಟ್ಟಿ ಬಡಗಬೆಳ್ಳೂರು ಉಪಸ್ಥಿತರಿದ್ದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...