Thursday, February 5, 2026

ಮಾ.7ರಂದು (ನಾಳೆ) ಪುಂಜಾಲಕಟ್ಟೆ ಸ.ಪ್ರೌ.ಶಾಲೆ: ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಬಂಟ್ವಾಳ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ  ಮಾ.7ರಂದು ಶಾಲೆಯಲ್ಲಿ ನಡೆಯಲಿದೆ. 60ವರ್ಷಗಳ ಹಿಂದೆ  ಸ್ಥಾಪನೆಗೊಂಡ ಇಲ್ಲಿನ ಸರಕಾರಿ ಪ್ರೌಢ ಶಾಲೆ ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಅಭಿವೃದ್ಧಿ ಹೊಂದಿದ್ದು,  ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ.

ಶಾಲೆಯ ಪ್ರಗತಿ ಚಿಂತನೆಗಾಗಿ  ಇಲ್ಲಿನ ಹಳೆ ವಿದ್ಯಾರ್ಥಿ ಸಂಘವನ್ನು ಪುನರ್‌ರಚಿಸಲು ಹಳೆ ವಿದ್ಯಾರ್ಥಿಗಳ ಸಂಘದ ಸಭೆ, ಸಮ್ಮಿಲನ ಕಾರ್ಯಕ್ರಮ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಸಂಘಟನೆಯ ವೃದ್ಧಿಗಾಗಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕಾಗಿ ಸಂಘದ ಅಧ್ಯಕ್ಷ ಡಾ. ಹರ್ಷ ಸಂಪಿಗೆತ್ತಾಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...