Wednesday, January 28, 2026

ಶ್ರೀ ಒಡಿಯೂರು ಜನಸೇವಾ ಕೇಂದ್ರದ ಉದ್ಘಾಟನಾ ಸಮಾರಂಭ

ಕನ್ಯಾನ: ಮಾ.6ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕನ್ಯಾನದಲ್ಲಿ ಶ್ರೀ ಒಡಿಯೂರು ಜನಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಒಡಿಯೂರು ಜನಸೇವಾ ಕೇಂದ್ರ (ಡಿಜಿಟಲ್ ಸೇವಾ ಕೇಂದ್ರ) ಉದ್ಘಾಟಿಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣವಾಗಲು ಜನಸೇವಾ ಕೇಂದ್ರವು ಜನಪರವಾಗಿ ಕಾರ್ಯ ನಿರ್ವಹಿಸಲಿ ಸಮಾಜದ ಔನತ್ಯಕ್ಕೆ ಪೂರಕವಾಗಿರಲಿ, ಪ್ರತಿಯೊಬ್ಬರೂ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ, ದುಶ್ಚಟಮುಕ್ತ ಸಮಾಜ ನಿರ್ಮಾಣವಾಗಲಿ, ಬದುಕು ಕೌಶಲ್ಯಯುತವಾಗಲಿ, ಎಂದು ಪರಮಪೂಜ್ಯ ಶ್ರೀ.ಶ್ರೀ.ಗುರುದೇವಾನಂದ ಸ್ವಾಮೀಜಿ ಆಶೀರ್ವಚನಗೈದರು.

ಮುಖ್ಯ ಅತಿಥಿಗಳಾದ ಪುತ್ತೂರು ಮೇದಿನಿ ಜನಸೇವಾ ಕೇಂದ್ರದ ಸರಿತಾನವೀನ್ , ಜನಸೇವಾ ಕೇಂದ್ರಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸ್ಥೂಲವಾಗಿ ವಿವರಿಸಿ, ಶುಭ ಹಾರೈಸಿದರು.
ಇನ್ನೋರ್ವ ಅತಿಥಿ ಕನ್ಯಾನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ ಮಿತ್ತಳಿಕೆ ಇವರು, ಜನಸೇವಾ ಕೇಂದ್ರ ಮತ್ತು ಕಂದಾಯ ಇಲಾಖೆಯ ಸಂಬಂಧ ಹಾಗೂ ಸಕಾಲ ಕಾಯಿದೆ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಲ|| ಎ.ಸುರೇಶ್ ರೈ, ಗಣಪತಿ ಭಟ್ ಸೇರಾಜೆ, ಹಿರಿಯ ಪತ್ರಕರ್ತ ಯಶವಂತ ವಿಟ್ಲ, ಶ್ರೀ.ಲಿಂಗಪ್ಪ ಗೌಡ ಪನೆಯಡ್ಕ, ಸುನೀತಾ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಒಡಿಯೂರು ವೃತ್ತಿ ಶಿಕ್ಷಣ ವಿಭಾಗವು ನಡೆಸಿಕೊಟ್ಟಂತಹ ಟೈಲರಿಂಗ್ ಮತ್ತು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪೂಜ್ಯ ಶ್ರೀಗಳು ಪ್ರಮಾಣ ಪತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಡಿಯೂರು ರಥೋತ್ಸವದಂದು ಐ.ಟಿ.ಐ ವತಿಯಿಂದ ಐಸ್‌ಕ್ಯಾಂಡಿ ತಯಾರಿಕೆ ಮತ್ತು ಮಾರಾಟದಲ್ಲಿ ವಿಶೇಷ ರೀತಿಯಲ್ಲಿ ಸಹಕರಿಸಿದ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಪೂಜ್ಯ ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು.

ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕನ್ಯಾನ ಇದರ ಪ್ರಾಚಾರ್ಯರಾದ ಕರುಣಾಕರ ಎನ್.ಬಿ ಪ್ರಾಸ್ತವಿಸಿ ಸ್ವಾಗತಿಸಿದರು, ಅಶ್ವಥ್ ವಂದಿಸಿದರು. ಜಯಂತ್ ಆಜೇರು ರವರು ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...