Saturday, July 12, 2025

ಮುಸುಕುದಾರಿಗಳಿಂದ ವ್ಯಕ್ತಿಗೆ ಹಲ್ಲೆ

ಬಂಟ್ವಾಳ: ವ್ಯಕ್ತಿಯೊಬ್ಬರಿಗೆ ಮುಸುಕುದಾರಿ ತಂಡವೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಇಲ್ಲಿನ ಕಡೇಶಿವಾಲಯದ ಭಂಡಾರಿಬೆಟ್ಟು ನಿವಾಸಿ ಅಬ್ದುಲ್ ಲತೀಫ್ (50) ಹಲ್ಲೆಗೊಳಗಾಗಿದ್ದು, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 


ಘಟನೆ ವಿವರ:
ಲತೀಫ್ ಅವರು ಮಂಗಳವಾರ ರಾತ್ರಿ ಭಂಡಾರಿ ಬೆಟ್ಟುವಿನಲ್ಲಿರುವ ತನ್ನ ಅಣ್ಣನ ಮನೆಯಿಂದ ನಡೆದುಕೊಂಡು ಹೋಗುವಾಗ ಮುಸುಕುದಾರಿ ತಂಡವೊಂದು ಅಡ್ಡಗಟ್ಟಿದೆ. ಬಳಿಕ ನಿರ್ಜನ ಪ್ರದೇಶದಕ್ಕೆ ಕರೆದುಕೊಂಡು ಹೋಗಿ ದೊಣ್ಣೆ ಹಾಗೂ ಇನ್ನಿತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಘಟನೆಯಿಂದ ಲತೀಫ್ ಅವರ ತಲೆ, ಮುಖ, ಬೆನ್ನು ಹಾಗೂ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರುದಾರರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ದೂರುದಾರರು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿರುವ ಲತೀಫ್ ಅವರ ಮೇಲೆ ತಿಂಗಳ ಹಿಂದೆ ರಥಬೀದಿ ಎಂಬಲ್ಲಿ ತಂಡವೊಂದು ಹಲ್ಲೆ ಮಾಡಿತ್ತು. ಇದೇ ತಂಡ ಮತ್ತೆ ಹಲ್ಲೆ ನಡೆಸಿರಬಹುದೆಂದು ದೂರುದಾರರು ಶಂಕಿಸಿದ್ದಾರೆ.
ಘಟನೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...