Sunday, January 25, 2026

ಪುರುಷರ ವ್ಯಕ್ತಿತ್ವ ರೂಪಿಸುವುದೇ ಮಹಿಳೆಯರು: ಪ್ರೋ ಸುರೇಶ್‌ನಾಥ್

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರು. ಒಬ್ಬ ಮಗುವಿನ ವ್ಯಕ್ತಿತ್ವ ರೂಪಿಸಲು ತಾಯಿ ಬೇಕು. ಗಂಡನ ಯಶಸ್ಸಿಗೆ ಹೆಂಡತಿ ಅನಿವಾರ್ಯ ಮತ್ತು ಮನೆಯ ಶಾಂತಿ ಮತ್ತು ನೆಮ್ಮದಿ ವಾತಾವರಣಕ್ಕೆ ಮಹಿಳೆ ಅತೀ ಅಗತ್ಯ. ಹೀಗೆ ಒಬ್ಬ ಮಹಿಳೆ ಅಮ್ಮನಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ಸೊಸೆಯಾಗಿ ಪುರುಷರ ವ್ಯಕ್ತಿತ್ವ ರೂಪಿಸುವಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತಾರೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೋ.ಯಮ್.ಎಲ್.ಸುರೇಶ್‌ನಾಥ್, ನಿವೃತ್ತ ಪ್ರೋಫೆಸರ್, ಸೈಂಟ್ ಅಲೋಶಿಯಸ್ ಕಾಲೇಜು, ಮಂಗಳೂರು ಇವರು ನುಡಿದರು.

ಮಾ.8 ರ ಸೋಮವಾರದಂದು ಜಿಲ್ಲಾ ಗೃಹರಕ್ಷಕ ದಳ, ಮೇರಿಹಿಲ್, ಮಂಗಳೂರು ಕಚೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗೃಹರಕ್ಷಕಿಯರಾದ ಸುಮಿತ್ರಾ, ಮೆಟಲ್ ಸಂಖ್ಯೆ 68,  ಮಂಜುಳಾ, ಮೆಟಲ್ ಸಂಖ್ಯೆ 168, ಹಾಗೂ ಉಷಾ, ಮೆಟಲ್ ಸಂಖ್ಯೆ 150 ಇವರಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಇವರು ಮಾತನಾಡಿ ಮಹಿಳೆ ದೈಹಿಕವಾಗಿ ಪುರುಷರಿಗಿಂತ ಬಲಾಡ್ಯವಲ್ಲದಿದ್ದರೂ, ಮಾನಸಿಕವಾಗಿ ಮಹಿಳೆ ಪುರುಷರಿಗಿಂತಲೂ ಬಲಶಾಲಿ, ಒತ್ತಡದ ಸನ್ನಿವೇಶವನ್ನು ನಿಭಾಯಿಸುವಲ್ಲಿ ಮಹಿಳೆ ಹೆಚ್ಚು ಯಶಸ್ವಿಯಾಗುತ್ತಾರೆ. ಒಂದು ಪರಿಪೂರ್ಣ ಮನೆ, ಕುಟುಂಬ, ಸಮಾಜ, ನಾಡು ಮತ್ತು ದೇಶ ಕಟ್ಟಬೇಕಾದಲ್ಲಿ ಮಹಿಳೆ ಅನಿವಾರ್ಯಳು. ತಮ್ಮ ಕುಟುಂಬ ನಿರ್ವಹಣೆ ಜೊತೆಗೆ ಗೃಹರಕ್ಷಕಿಯಾಗಿ ಕೆಲಸ ಮಾಡಿ ಸಮಾಜದ ಸ್ವಾಸ್ಥ ಕಾಪಾಡುವ ಮಹಿಳಾ ಗೃಹರಕ್ಷಕಿಯರ ಕೊಡುಗೆ ಅತೀ ಅಮೂಲ್ಯ ಎಂದು ನುಡಿದರು.

ಈ ಕಾರ್ಯಕ್ರಮದಲ್ಲಿ ಸಾರ್ಜೆಂಟ್ಆದ ಸುನೀಲ್ ಸ್ವಾಗತಿಸಿದರು. ಉಪಸಮಾದೇಷ್ಟರಾದ ರಮೇಶ್‌ರವರು ವಂದಿಸಿದರು ಹಾಗೂ ಕಚೇರಿಯ ಅಧೀಕ್ಷಕರಾದ ರತ್ನಾಕರ, ಪ್ರಥಮ ದರ್ಜೆ ಸಹಾಯಕಿಯಾದ ಅನಿತಾ ಟಿ.ಎಸ್, ದ್ವಿತೀಯ ದರ್ಜೆ ಸಹಾಯಕರಾದ ಕಿರಣ್ ಕುಮಾರ್, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕರಾದ ದಿವಾಕರ್, ದುಶ್ಯಂತ್, ಜಯಲಕ್ಷ್ಮಿ, ಶುಭ, ಸುನಿಲ್, ಸುನಿಲ್ ಪುಜಾರಿ, ಗಾಯತ್ರಿ, ಜಯಂತಿ, ಸೆಲೇಸ್ಟಿನ್, ದಿವ್ಯಾ, ಮನೋರಮ, ಸವಿತಾ, ಸಬಿತಾ, ನೂರ್‌ಜಾನ್, ಸುಮಿತ್ರಾ, ಭಾರತಿ ಆರ್, ಮೋಹಿನಿ, ಶಾಲಿನಿ, ಶ್ರುತಿ ಸುಮಾರು 30 ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...