Tuesday, January 27, 2026

ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಬಂಟ್ವಾಳ: ಮಾ.9: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 38.70 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡು 23 ಗ್ರಾಮಗಳಿಗೆ ಒಳಪಟ್ಟ ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸೋಮವಾರ ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ನೇತೃತ್ವದ ನಿಯೋಗದೊಂದಿಗೆ ವೀಕ್ಷಿಸಿದರು.

 


ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಜಿ.ಪಂ.ಸದಸ್ಯ ಬಿ.ಪದ್ಮಶೇಖರ್ ಜೈನ್ ನಿಯೋಗದಲ್ಲಿದ್ದರು. ಈ ವೇಳೆ ಮಾಜಿ ಸಚಿವರು ಪಂಚಾಯತ್‌ರಾಜ್ ಇಲಾಖೆಯ ಕಿರಿಯ ಎಂಜಿನಿಯರ್ ಕೃಷ್ಣ ಅವರಿಂದ ಮಾಹಿತಿ ಪಡೆದು, ಕುಡಿಯುವ ನೀರಿನ ಈ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು, ಈ ಯೋಜನೆಯು ನನ್ನ ಜೀವನದ ಕನಸಿನ ಯೋಜನೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಬೇಬಿ ಕುಂದರ್, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್, ತಾ.ಪಂ.ಮಾಜಿ ಸದಸ್ಯ ಸಂಪತ್‌ಕುಮಾರ್ ಶೆಟ್ಟಿ, ತಾ.ಪಂ.ಮಾಜಿ ಉಪಾಧ್ಯಕ್ಷೆ ಕಾಂಚಲಾಕ್ಷಿ, ಗ್ರಾ.ಪಂ.ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ಯೋಗೀಶ್ ಶೆಟ್ಟಿ, ಶಿವಪ್ಪ ಪೂಜಾರಿ ಹಟ್ಟದಡ್ಕ, ಪ್ರೆಸಿಲ್ಲಾ, ರೇಷ್ಮಾ ದಿವಾಕರ ಪೂಜಾರಿ, ಪ್ರಮುಖರಾದ ಸತೀಶ್ ಪೂಜಾರಿ, ಬಾಲಕೃಷ್ಣ ಕೊಟ್ಟುಂಜ, ಸದಾನಂದ ಶೆಟ್ಟಿ ಕಾವಳಕಟ್ಟೆ, ಬಿ.ಆರ್.ಅಂಚನ್, ಮಮತಾ ದಿನೇಶ್ ಜತೆಗಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...