Wednesday, January 28, 2026

ತುಂಗಪ್ಪ ಬಂಗೇರರಿಗೆ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಬಂಟ್ವಾಳ: ದ.ಕ.ಜಿ.ಪಂ. ಸದಸ್ಯ, ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ  ಎಂ. ತುಂಗಪ್ಪ ಬಂಗೇರ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ2020ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಮಾ.7ರಂದು ನಡೆದ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಸಾಮಾಜಿಕ, ಶೈಕ್ಷಣಿಕ, ಸಾಂಸ್ಕ ತಿಕ ಧಾರ್ಮಿಕ , ಕ್ರೀಡಾ,  ಜಾನಪದ ಕ್ಷೇತ್ರದಲ್ಲಿ ಅಸಾಧಾರಣ ಇಚ್ಛಾಶಕ್ತಿಯಿಂದ  ತುಳುನಾಡಿನಲ್ಲಿ ಸಮಾಜ ಸೇವೆಗೈಯ್ಯುತ್ತಿರುವ, ಕಳೆದ 13 ವರ್ಷಗಳಿಂದ ಸಾಮೂಹಿಕ ವಿವಾಹ ಸಮಾರಂಭದ ಮೂಲಕ 450ಕ್ಕೂ ಮಿಕ್ಕಿ  ಅರ್ಹ ಬಡವರಿಗೆ ಕಂಕಣ ಭಾಗ್ಯವನ್ನು ನೀಡಿದ ಎಂ.ತುಂಗಪ್ಪ ಬಂಗೇರ ಅವರಿಗೆ ಈ ಪ್ರಶಸ್ತಿ ಸಂದಾಯವಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಮೀನುಗಾರಿಕಾ ಸಚಿವ ಎಸ್. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಡಾ. ಪ್ರಭಾಕರ ಭಟ್ ಕಲ್ಲಡ್ಕ, ರಾಜ್ಯ ಸಭಾ ಸದಸ್ಯ ನಾರಾಯಣ,ಕರಾವಳಿ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,   ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ  ಡಿ. ಸುರೇಂದ್ರ ಕುಮಾರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ   ದಯಾನಂದ ಕತ್ತಲ್‌ಸಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ.ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...