Thursday, June 26, 2025

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಉತ್ಸವದಲ್ಲಿ ಭಾಗಿಯಾಗುವಂತೆ ಪ್ರತಿನಿಧಿಗಳಿಗೆ ಪ್ರಭಾಕರ ಪ್ರಭು ಕರೆ

ಬಂಟ್ವಾಳ: ಮಾ.10 ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆಗಳು ಉಡುಪಿ ಜಿಲ್ಲೆಯ ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಮಾರ್ಚ್ 13 ಶನಿವಾರ ಜರಗಲಿದ್ದು,ಈ ಕಾರ್ಯಕ್ರಮವು ಸ್ಥಳೀಯಾಡಳಿತ ಪ್ರತಿನಿಧಿ ಹಾಗೂ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀವಾಸ ಪೂಜಾರಿ ಸಂಚಾಲಕತ್ವದಲ್ಲಿ ಜರಗಲಿದ್ದು ವಿಕೇಂದ್ರೀಕರಣಕ್ಕೊದು ದಿಕ್ಸೂಚಿ ಎಂಬ ಪರಿಕಲ್ಪನೆಯಡಿಯಲ್ಲಿ “ಹೊಳಪು-2021″ನಾಮಾಂಕಿತದಲ್ಲಿ ಪಕ್ಷಾತೀತಾವಾಗಿ ಪ್ರತಿವರ್ಷದಂತೆ ಈ ವರ್ಷವೂ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳು ಭಾಗವಹಿಸಿ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಸ್ಪೂರ್ತಿಯಾಗ ಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಮನವಿ ಮೂಲಕ ವಿನಂತಿಸಿದ್ದಾರೆ.

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸುವ ಏಕೈಕ ಜನ ಪ್ರತಿನಿಧಿಗಳು ಸ್ಥಳೀಯ ಸಂಸ್ಥೆಗಳಾದ ತ್ರಿಸ್ತರದ ಪಂಚಾಯತ್ ಗಳಾದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳಾದ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ,ಮಹಾನಗರ ಪಾಲಿಕೆಗಳಲ್ಲಿ ಮಾತ್ರ ಕಾಣಲು ಸಾದ್ಯ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಇಂತಹ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಒಟ್ಟು ಸೇರಿಸಿ,ಕ್ರೀಡೋತ್ಸವ-ಸಾಂಸ್ಕ್ರತಿಕ ಸ್ಪರ್ಧೆಗಳನ್ನು ರಾಜ್ಯದ ಇತಿಹಾಸದಲ್ಲಿ ಕಳೆದ 5 ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಆಗುತ್ತಿರುವುದು ಕರಾವಳಿ ಭಾಗದ ಜನ ಪ್ರತಿನಿಧಿ ಗಳಿಗೆ ಹೆಮ್ಮೆಯ ವಿಚಾರವಾಗಿದೆ.

ಈಗಾಗಲೇ ಇಂತಹ ಜನ ಪ್ರತಿನಿಧಿಗಳ ಸಮ್ಮಿಲನಗಳಿಂದ ಸ್ಥಳೀಯಾಡಳಿತ ಪ್ರತಿನಿಧಿಗಳ ಕೆಲವು ಬೇಡಿಕೆಗಳು ಸಾಕಾರಗೊಂಡಿವೆ.ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ 250 ರಿಂದ 1000 ಕ್ಜೆ ಏರಿಕೆ, ಅನುದಾನ ದಲ್ಲಿ ಹೆಚ್ಚಳ,ಸದಸ್ಯರಿಗೆ ಹೆಚ್ಚಿನ ಅಧಿಕಾರ, ಹೀಗೆ ಹಲವು ಬೇಡಿಕೆ ಗಳು ಈಡೇರಿಸಲು ಸಾದ್ಯವಾಗಿದೆ.ಈ ನಿಟ್ಟಿನಲ್ಲಿ ಮಾರ್ಚ್ 13 ರಂದು ನಡೆಯುವ ಹೊಳಪು-2021 ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ,ಕೇಂದ್ರ ಸಚಿವರಾದ ಪ್ರಹ್ಲದ್ ಜೋಷಿ,ಸೇರಿದಂತೆ ಹಲವಾರು ಕೇಂದ್ರ, ರಾಜ್ಯ ಸರಕಾರದ ಸಚಿವರು, ಉನ್ನತ ಮಟ್ಟದ ಅಧಿಕಾರಿ ಗಳು ಭಾಗವಹಿಸುವ ನಿರೀಕ್ಷೆ ಇದೆ.ಈ ಸಮಯದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಬೇಡಿಕೆ ಗಳ ಕುರಿತು ಸ್ಥಳೀಯ ಜನ ಪ್ರತಿನಿಧಿಗಳ ಪರವಾಗಿ ಸಚಿವರ ಕೋಟ ಶ್ರೀನಿವಾಸ ಪೂಜಾರಿ ಅವರು ಹಕ್ಕು ಮತ್ತು ವಿಷಯ ಮಂಡನೆ ಬಗ್ಗೆ ಮನವಿ ಮಾಡಲಿದ್ದಾರೆ.

ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಬಲವರ್ಧನೆಗಾಗಿ ಹಾಗೂ ಪ್ರತಿನಿಧಿಗಳ ಹಕ್ಕೋತ್ತಾಯ ಸಾಕಾರ ಗೊಳ್ಳುವಂತಾಗಲು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮ ದಲ್ಲಿ ಭಾಗವಹಿಸುವಂತೆ ತಾ.ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿರುತ್ತಾರೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...