Saturday, January 31, 2026

ಉಡುಪಿ: ಅಜ್ಜರಕಾಡು ಕ್ರೀಡಾಂಗಣದಲ್ಲಿ ಮಾರ್ಚ್ 17ರಿಂದ ಸೇನಾ ನೇಮಕಾತಿ

ಉಡುಪಿ: ಮಾ.10 ಭಾರತೀಯ ಸೇನಾ ನೇಮಕಾತಿ ರ್‍ಯಾಲಿಯು ಮಾರ್ಚ್17ರಿಂದ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿದ್ದು, ರ್‍ಯಾಲಿಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ್‍ಯಾಲಿಯ ಕುರಿತು ಅಧ್ಯಕ್ಷತೆ ವಹಿಸಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

”ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕುರಿತಂತೆ ನಗರಸಭೆ ವತಿಯಿಂದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ತುರ್ತು ಚಿಕಿತ್ಸೆಗಾಗಿ ಅಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳ ಶಾಲಾ ಅಂಕಪಟ್ಟಿಗಳ ಪರಿಶೀಲನೆಗೆ ಶಿಕ್ಷಣ ಇಲಾಖೆಯ20 ಮಂದಿ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅಗತ್ಯವಿದ್ದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

”ನೇಮಕಾತಿಗಾಗಿ ಪ್ರತಿದಿನ ಸುಮಾರು 3000 ಮಂದಿ ಅಭ್ಯರ್ಥಿಗಳು ಆಗಮಿಸಲಿದ್ದು, ನೂಕು ನುಗ್ಗಲು ತಪ್ಪಿಸಲು ಮತ್ತು ರ್‍ಯಾಲಿಯು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಸೂಕ್ತ ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ ಮತ್ತು ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು” ಎಂದು ಡಿಸಿ ಹೇಳಿದರು.

”ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ್‍ಯಾಲಿಯು ಅತ್ಯಂತ ಯಶಸ್ವಿಯಾಗಿ ನಡೆಯುವಂತೆ, ಸೇನೆಯ ಅಧಿಕಾರಿಗಳು ಕೋರುವ ಎಲ್ಲಾ ಸಹಕಾರವನ್ನು ನೀಡಲಾಗುವುದು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸೇನಾ ನೇಮಕಾತಿ ವಿಭಾಗದ ಕರ್ನಲ್ ದುಬಾಷ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...