Tuesday, January 27, 2026

ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ವ್ಯಕ್ತಿ ಶವವಾಗಿ ಪತ್ತೆ

ಬಂಟ್ವಾಳ: ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ನರ್ಶಾ ಬೋಳಂತೂರಿನ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಮೃತ ವ್ಯಕ್ತಿಯನ್ನು ಮುತಾಲಿಬ್ ಎಂದು ಗುರುತಿಸಲಾಗಿದೆ.

ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದ ಮುತಾಲಿಬ್‌ನ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಇದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಆತನ ಶವ ಪತ್ತೆಯಾಗಿದೆ ಎಂದು ದುಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ ಭಾನುವಾರ ಆಲ್ ರಫಾದಲ್ಲಿ ಶವ ಪತ್ತೆಯಾಗಿದ್ದು, ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪಾಸ್ ಪೋರ್ಟ್ ಆಧಾರದ ಮೇಲೆ ಭಾರತೀಯ ಪ್ರಜೆ ಎಂದು ಗುರುತಿಸಿ ಪೊಲೀಸರು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾರೆ ಸದ್ಯ ಶವವನ್ನು ದುಬೈ ರಶೀದ್ ಆಸ್ಪತ್ರೆಯಲ್ಲಿಡಲಾಗಿದೆ. ಮುತಾಲಿಬ್ ಅವರು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುತ್ತಿದ್ದರು. ಮದರಸಾದಲ್ಲಿ ಧಾರ್ಮಿಕ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದರು ನಂತರ ಎಂಜಿನಿಯರಿಂಗ್ ಮುಗಿಸಿ ದುಬೈನಲ್ಲಿ ಕೆಲಸ ಪಡೆದಿದ್ದರು. ಇವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...