Sunday, February 1, 2026

ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ : ಕೊಲೆ ಶಂಕೆ

ಉಳ್ಳಾಲ: ಮಾ.10ನೇಣುಬಿಗಿದ ಸ್ಥಿತಿಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದ್ದು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕುಂಪಲ ಆಶ್ರಯಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಶವವಾಗಿ ಪತ್ತೆಯಾದಾಕೆ. ಮಂಗಳೂರು ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆ ಇಂದು ರಜೆ ಪಡೆದುಕೊಂಡು ಮನೆಯಲ್ಲೇ ಇದ್ದಳು. ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಗೆ ಮೂವರು ಬಂದು ಹೋಗಿದ್ದರು ಎನ್ನಲಾಗಿದೆ .ಮಧ್ಯಾಹ್ನ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಕೋಣೆಯೊಳಗೆ ಪ್ರೇಕ್ಷಾಲ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀರು ಕೊಲೆ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...