Tuesday, January 27, 2026

ಕೈಕುಂಜೆ ರಸ್ತೆ ಕಾಮಗಾರಿ ಆರಂಭ

ಬಂಟ್ವಾಳ: ಮಾ.11 ಬಿ.ಸಿ.ರೋಡು-ಕೈಕುಂಜೆ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಗಿದ್ದು, ಪ್ರಸ್ತುತ ರಸ್ತೆಯ ಒಂದು ಬದಿಯಲ್ಲಿ ಹಿಂದಿನ ರಸ್ತೆಯನ್ನು ಅಗೆಯುವ ಕಾರ್ಯ ಆರಂಭಿಸಲಾಗಿದೆ. ಬಿ.ಸಿ.ರೋಡು ಸುಂದರೀಕರಣ ಭಾಗವಾಗಿ ಮಾ. 3ರಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಅವರು 2ಕೋ.ರೂ.ಗಳ 190ಮೀ. ಉದ್ದದ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು.

 

ಕೈಕುಂಜೆ ರಸ್ತೆಯು ವಾಹನ ಹಾಗೂ ಜನನಿಬಿಡ ಪ್ರದೇಶವಾಗಿದ್ದು, ಹೀಗಾಗಿ ವಾಹನಗಳು ನಿಂತು ಕಾಮಗಾರಿಗೆ ತೊಂದರೆಯಾಗಬಾರದು ಎಂದು ಸಂಚಾರಿ ಪೊಲೀಸ್ ಸಿಬಂದಿಯನ್ನೂ ನಿಯೋಜಿಸಲಾಗಿದೆ. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ನಡೆಯುತ್ತಿದ್ದು, ಈ ಭಾಗದಲ್ಲಿ ವಾಹನಗಳನ್ನು ನಿಲ್ಲಿಸದಂತೆ ಸೂಚನಾ ಫಲಕ ಅಳವಡಿಸಲಾಗಿದೆ.ಜತೆಗೆ ಸ್ಥಳೀಯ ಟೂರಿಸ್ಟ್ ಕಾರು ಪಾರ್ಕಿಂಗ್, ಟೂರಿಸ್ಟ್ ಟೆಂಪೋ ಪಾರ್ಕಿಂಗ್‌ಗಳನ್ನೂ ಸ್ಥಳಾಂತರಿಸಲಾಗಿದೆ.

ಒಂದು ಬದಿಯ ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೊಂದು ಬದಿಯ ಕಾಮಗಾರಿ ಆರಂಭಗೊಳ್ಳುವ ಸಾಧ್ಯತೆ ಇದೆ. ಇಲ್ಲಿ 190 ಮೀ. ಉದ್ದದ 2 ರಸ್ತೆಗಳು ನಿರ್ಮಾಣವಾಗಲಿದ್ದು, ಮಧ್ಯದಲ್ಲಿ ಡಿವೈಡರ್ ಬರಲಿದೆ. ಜತೆಗೆ ಡಾಮಾರು ಕಿತ್ತು ಹೋಗಿರುವ ತಾ.ಪಂ.ಸಂಪರ್ಕ ರಸ್ತೆಗೂ 100ಮೀ. ಡಾಮಾರು ಕಾಮಗಾರಿ ನಡೆಯಲಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...