Thursday, January 29, 2026

ಮಾ!14 ರಂದು ಸಜೀಪ ಪೆಲತ್ತಕಟ್ಟೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬಂಟ್ವಾಳ: ಮಾ.13 ಶ್ರೀ ದುರ್ಗಾಪರಮೇಶ್ವರೀ ಭಕ್ತ ವೃಂದ, ಸಜೀಪಮಾಗಣೆ ಶ್ರೀ ದುರ್ಗಾಪರಮೇಶ್ವರೀ ಬಂಟ್ವಾಳ ತಾಲೂಕು ಪಂಚಮ ವರ್ಷದ ಯಕ್ಷಗಾನ ಬಯಲಾಟ ಸೇವೆ ಸಜೀಪ ಮೂಡದ ಪೆಲತ್ತಕಟ್ಟೆ ಮೈದಾನದಲ್ಲಿ ದಿನಾಂಕ 14/03/2021ರ ಭಾನುವಾರ ರಾತ್ರಿ ಘಂಟೆ 8.30ರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು ಆಡಿತೋರಿಸಲಿರುವರು.

ಸಜೀಪಮುನ್ನೂರು ಯುವಕ ಸಂಘ(ರಿ) ಕಂದುರಿನಿಂದ ಪೆಲತ್ತಕಟ್ಟೆಗೆ ಭಜನೆ, ಚೆಂಡೆ, ಬ್ಯಾಂಡ್ ವಾದನದೊಂದಿಗೆ ಮೇಳದ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ, ಸಂಜೆ6.30ರಿಂದ ಧಾರ್ಮಿಕ ಪ್ರಭೋಧನಾ ಸಭೆ ನಡೆಯಲಿದ್ದು ದೀಪೋಜ್ವಲನ ಮತ್ತು ಪರಮಪೊಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಂದ ಆಶೀರ್ವಚನ ನಡೆಯಲಿದೆ, ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣರು, ಸದಾನಂದ ವಂಕಟೇಶ ಅಸ್ರಣ್ಣರು ಭಾಗವಹಿಸಲಿದ್ದಾರೆ.
ಚೌಕಿ ಪೊಜೆ, ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಲಿದೆ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...