Friday, February 6, 2026

ಸಾಮೂಹಿಕ ಪ್ರಯತ್ನ, ಕಠಿಣ ಕ್ರಮಗಳಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ

 

ದೆಹಲಿ: ಮಾ.17ದೇಶದ ವಿವಿಧೆಡೆ ಮತ್ತೆ ಕೊರೊನಾ ಆತಂಕ ಮುಂದುವರೆದಿದೆ ಮಾಸ್ಕ್ ಧರಿಸುವುದು ಮತ್ತು ಅಂತರ ಪಾಲಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ಸಂವಾದ ನಡೆಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ಮಾದರಿ ಪರೀಕ್ಷೆಗಳು ಹೆಚ್ಚಾಗಬೇಕು. ಕೆಲ ರಾಜ್ಯಗಳಲ್ಲಿ ದೀಢೀರನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸಣ್ಣ ನಗರಗಳಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು ಎಂದು ಸೂಚಿಸಿದರು. ವಿಶ್ವದ ಹಲವು ದೇಶಗಳು ಕೊರೊನಾದ ಹಲವು ಅಲೆಗಳನ್ನು ಎದುರಿಸಬೇಕಾಯಿತು. ನಮ್ಮ ದೇಶದಲ್ಲಿಯೂ, ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆ. ಈ ಬಗ್ಗೆ ಕೆಲ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪರೀಕ್ಷೆಯ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡುಬಂದಿದೆ ಎಂದರು.

ಕೆಲ ಜಿಲ್ಲೆಗಳು ಮೊದಲಿನಿಂದಲೂ ಕೊರೊನಾ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದವು. ಸುರಕ್ಷಿತ ವಲಯಗಳಾಗಿದ್ದ ಅನೇಕ ಜಿಲ್ಲೆಗಳಲ್ಲಿ ಇದೀಗ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ 96ರಷ್ಟು ಇರುವುದು ಗಮನಾರ್ಹ ಸಂಗತಿ. ಸೋಂಕಿತರ ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದು ಎಂದು ಮೋದಿ ಹೇಳಿದರು.

ದೇಶದಲ್ಲಿ ಕೊರೋನಾ 2ನೇ ಅಲೆ ವಿಸ್ತರಣೆಗೆ ಕಡಿವಾಣ ಹಾಕಬೇಕಿದೆ. ಇದಕ್ಕಾಗಿ ನಾವು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಭಾರತ ಸೇರಿ ವಿಶ್ವದ ಹಲವು ದೇಶಗಳು ಕೊರೊನಾದ ಹಲವು ಅಲೆಗಳನ್ನು ಎದುರಿಸಿವೆ.
ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಇಂಥ ಪ್ರದೇಶಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಗಮನ ನೀಡಬೇಕು. ಸಣ್ಣಸಣ್ಣ ನಗರಗಳಲ್ಲಿಯೂ ಕೊವಿಡ್ ಟೆಸ್ಟ್, ಲಸಿಕೆ ವಿತರಣೆ ಕೇಂದ್ರಗಳ ಸಂಖ್ಯೆ ಹೆಚ್ಚಾಗಬೇಕು. ದೇಶದಲ್ಲಿ ಪ್ರತಿದಿನ 30ಲಕ್ಷ ಜನರಿಗೆ ಲಸಿಕೆ ನೀಡಬೇಕು. ಸಾಮೂಹಿಕ ಪ್ರಯತ್ನ, ಕಠಿಣ ಕ್ರಮಗಳಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ನುಡಿದರು.

ಕೊರೊನಾ ನಿಯಂತ್ರಣಕ್ಕೆ ಅತಿಸೂಕ್ಷ್ಮ ವಲಯಗಳನ್ನು (ಮೈಕ್ರೊ ಕಂಟೇನ್ಮೆಂಟ್ ಜೋನ್) ಗುರುತಿಸಿಕೊಂಡು ಯೋಜನೆಗಳನ್ನು ರೂಪಿಸುವುದು ಅತ್ಯಗತ್ಯ. ದೇಶದಲ್ಲಿರುವ ಎಲ್ಲರೂ ಮಾಸ್ಕ್? ಕಡ್ಡಾಯವಾಗಿ ಧರಿಸಬೇಕು. ಈ ವಿಚಾರದಲ್ಲಿ ಯಾರೊಬ್ಬರೂ ನಿರ್ಲಕ್ಷ್ಯ ತೋರಬಾರದು. ಸ್ಥಳೀಯ ಆಡಳಿತಗಳು ಸಹ ಮಾಸ್ಕ್? ಧಾರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಟೆಸ್ಟ್, ಟ್ರೇಸ್, ಟ್ರ್ಯಾಕ್ ಮಂತ್ರದಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿಲುವು ಪುನರುಚ್ಚರಿಸಿದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...