Sunday, January 25, 2026

ಚಾರ್ಮಾಡಿ ಘಾಟ್‌ನಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ:

 

ಚಿಕ್ಕಮಗಳೂರು: ಮಾ.18ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು, ಇದೀಗ ಮತ್ತೆ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಒಪ್ಪಿಗೆ ನೀಡಿದೆ. ಕಳೆದ 18 ತಿಂಗಳಿನಿಂದ ಮತ್ತೆ ಬಸ್ ಸಂಚಾರ ಆರಂಭವಾಗಿದೆ.

ಬುಧವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ವರದಿಯನ್ನು ಆಧರಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಕೊಟ್ಟಿಗೆಹಾರ, ಚಾರ್ಮಾಡಿ ಭಾಗದ ಜನರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಆದೇಶದಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

ಆದೇಶದಲ್ಲಿ ಏನಿದೆ?: ರಾಷ್ಟ್ರೀಯ ಹೆದ್ದಾರಿ 73 (ಹಳೆ ರಾಷ್ಟ್ರೀಯ ಹೆದ್ದಾರಿ 234) ಮಂಗಳೂರು-ತುಮಕೂರು ರಸ್ತೆಯ ಕಿ. ಮೀ. 86.200 (ಚಿಕ್ಕಮಗಳೂರು ಜಿಲ್ಲಾಗಡಿ) ರಿಂದ ಕಿ. ಮೀ.99.200 (ಕೊಟ್ಟಿಗೆಹಾರ) ರಸ್ತೆಯ ಮಾರ್ಗದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ದಿನದ 24 ಗಂಟೆ ಲಘು ಹಾಗೂ ಕೆಲ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಯಾವ ವಾಹನಗಳು?: ಜನರು ಸಂಚಾರ ನಡೆಸುವ ಕೆಎಸ್‌ಆರ್‌ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿ ಚಕ್ರ ವಾಹನಗಳು.

ಯಾವುದಕ್ಕೆ ಅನುಮತಿ ಇಲ್ಲ?: ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನ, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್‌ಆರ್‌ಟಿಸಿ ರಾಜಹಂಸ ಬಸ್, ಎಲ್ಲಾ ಬಗೆಯ ಅಧಿಕ ಬಾರದ ಸರಕು ಸಾಗಣೆ ವಾಹನ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...