Thursday, February 5, 2026

ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಭಾಸ್ಕರ್ ಎಂ. ನೇಮಕ

ಬಂಟ್ವಾಳ: ಭಾಸ್ಕರ್ ಎಂ. ಇವರನ್ನು ಉಳ್ಳಾಲ ಗೃಹರಕ್ಷಕ ದಳದ ಘಟಕಾಧಿಕಾರಿಯಾಗಿ ನೇಮಕ ಮಾಡಿ ಅಧಿಕಾರವನ್ನು ಹಸ್ತಾಂತರಿಸಲಾಗಿದೆ. ಗೃಹರಕ್ಷಕ ದಳದಲ್ಲಿ ಶ್ರೀ ಭಾಸ್ಕರ್ ಎಂ. ಮೆಟಲ್ ಸಂಖ್ಯೆ 01 ಅವರು ಗೃಹರಕ್ಷಕ ದಳದಲ್ಲಿ ಸುಮಾರು ೩೫ ವರ್ಷಗಳಿಂದ ಗೃಹರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಾ.19ರಂದು ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರುರವರು  ಭಾಸ್ಕರ್ ಎಂ. ಅವರಿಗೆ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು. ಉಳ್ಳಾಲ ಘಟಕದಲ್ಲಿ 44 ಸಂಖ್ಯಾಬಲವಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಗೃಹರಕ್ಷಕರನ್ನು ನೇಮಿಸಿ ಉಳ್ಳಾಲ ಗೃಹರಕ್ಷಕ ಘಟಕವನ್ನು ಬಲಪಡಿಸಬೇಕೆಂದು ಸಮಾದೇಷ್ಟರು ಸೂಚಿಸಿರುತ್ತಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಪಸಮಾದೇಷ್ಟರಾದ ಶ್ರೀ ರಮೇಶ್ ಅವರು ಉಪಸ್ಥಿತರಿದ್ದರು ಹಾಗೂ ಕಛೇರಿ ಅಧೀಕ್ಷಕರಾದ  ರತ್ನಾಕರ್, ಪ್ರಥಮ ದರ್ಜೆ ಸಹಾಯಕಿಯಾದ ಶ್ರೀಮತಿ ಅನಿತಾ ಟಿ.ಎಸ್., ಗೃಹರಕ್ಷಕರಾದ ಸುನಿಲ್ ಪೂಜಾರಿ, ಸುನಿಲ್ ಕುಮಾರ್, ದಿವಾಕರ್, ದುಷ್ಯಂತ್ ರೈ, ಜಯಲಕ್ಷ್ಮಿ, ಸುಲೋಚನಾ ಈ ಸಂದರ್ಭದಲ್ಲಿ ಹಾಜರಿದ್ದರು.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...