Thursday, January 29, 2026

ಪುತ್ತೂರು: ಬೈಕ್ ಮತ್ತು ಕಾರಿನ ನಡುವೆ ಢಿಕ್ಕಿ

 

ಪುತ್ತೂರು: ಮಾ20ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತ ನಡೆದಿದ್ದು, ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಕಾಂಚನ ಕ್ರಾಸ್ ಬಳಿ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದ್ದು ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...