Thursday, January 29, 2026

ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಸತತ ಎರಡನೇ ದಿನವೂ ದಾಖಲೆ ಸೃಷ್ಟಿಸಿದ್ದು, ಕಳೆದ 24ಗಂಟೆಯಲ್ಲಿ ದೇಶದಲ್ಲಿ 1.60 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಏಪ್ರಿಲ್ 13) ಬೆಳಗ್ಗೆ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,61,736 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 879 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 97,168 ಮಂದಿ ಗುಣಮುಖರಾಗಿರುವುದಾಗಿ ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಒಟ್ಟು 1.36 ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ 12.6 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 1,22,53,697 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,71,058ಕ್ಕೆ ಏರಿಕೆಯಾಗಿದೆ.

ಸೋಮವಾರ ದೇಶದಲ್ಲಿ 1.68 ಲಕ್ಷ ಕೋವಿಡ್ ಪ್ರಕರಣ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗಿತ್ತು. ಕೋವಿಡ್ ಎರಡನೇ ಅಲೆ ದಿಢೀರ್ ಹೆಚ್ಚಳವಾದ ಪರಿಣಾಮ ಇಡೀ ಜಗತ್ತಿನಲ್ಲಿಯೇ ಬ್ರೆಜಿಲ್ ಅನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನಕ್ಕೇರಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ಸೋಂಕು ಪ್ರಕರಣದಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಈವರೆಗೆ 3,12,67,359 ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತ ಎರಡನೇ ಸ್ಥಾನದಲ್ಲಿದ್ದು, ಬ್ರೆಜಿಲ್ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ ಈವರೆಗೆ 10.85 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ.

More from the blog

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...