Friday, June 27, 2025

ಹವಾಮಾನ ವೈಪರೀತ್ಯದ ಕಾರಣ ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್

ಮಂಗಳೂರು: ಇಲ್ಲಿನ ಬಜಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯರಾತ್ರಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಹವಾಮಾನ ವೈಪರೀತ್ಯದ ಕಾರಣದಿಂದ ಕೊಚ್ಚಿಯಲ್ಲಿ ಇಳಿಯಿತು. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾದ ಪ್ರಸಂಗ ಎದುರಾಯಿತು.  ದುಬೈನಿಂದ ಮಂಗಳೂರಿಗೆ 118 ಪ್ರಯಾಣಿಕರನ್ನು ಏರ್ ಇಂಡಿಯಾ 1XE 384 ವಿಮಾನ ಹೊರಟಿತ್ತು. ಮಧ್ಯರಾತ್ರಿ 12:30 ಕ್ಕೆ ಸಮಯದಲ್ಲಿ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮಂಗಳೂರಿನಲ್ಲಿ ಸಿಡಿಲು ಮಳೆಯಾಗುತ್ತಿದ್ದ ಕಾರಣ ಲ್ಯಾಂಡ್ ಮಾಡಲಾಗದೆ ಕೊಚ್ಚಿಗೆ ತೆರಳಿತ್ತು.ತಡರಾತ್ರಿ ಏಕಾಏಕಿ ಕೊಚ್ಚಿಯಲ್ಲಿ ಲ್ಯಾಂಡ್ ನಿಂದ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಅರ್ಧಗಂಟೆಯಲ್ಲಿ ಪುನ: ಮಂಗಳೂರಿಗೆ ತೆರಳುವುದೆಂದು ಸಿಬ್ಬಂದಿಗಳು ಪ್ರಯಾಣಿಕರನ್ನು ವಿಮಾನದಲ್ಲಿ ಕುಳ್ಳಿರಿಸಿದ್ದರು. ಆದರೆ ಮುಂಜಾನೆಯಾದರೂ ಮಂಗಳೂರಿಗೆ ಪ್ರಯಾಣ ಬೆಳಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು. ರಾತ್ರಿಯಿಡೀ ಊಟ ನಿದ್ದೆಯಿಲ್ಲದೇ ಪ್ರಯಾಣಿಕರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಮಯ ಕಳೆಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇಂದು ಮತ್ತೆ ಕೊಚ್ಚಿಯಿಂದ ಮಂಗಳೂರಿಗೆ ವಿಮಾನ ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...