Tuesday, January 27, 2026

ಬಂಟ್ವಾಳ ಸರಕಾರಿ ಆಸ್ಪತ್ರೆ ಮೇಲ್ದರ್ಜೆಯ ಪ್ರಸ್ತಾಪ: ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳ ಜೊತೆ ಪರಿಶೀಲನೆ

ಬಂಟ್ವಾಳ: ಶಿಕ್ಷಣ ಮತ್ತು ಆರೋಗ್ಯದ ಹೆಚ್ಚು ಮುತುವರ್ಜಿ ವಹಿಸಿ ರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕೊರೊನಾ ಸಂಕಷ್ಟದ ಅವಧಿಯಲ್ಲಿ ಸರಕಾರಿ ಆಸ್ಪತ್ರೆಗೆ ಅನೇಕ ಸವಲತ್ತುಗಳನ್ನು ಸರಕಾರದಿಂದ ಹಾಗೂ ವೈಯಕ್ತಿಕ ನೆಲೆಯಲ್ಲಿ ಕಲ್ಪಿಸಿದ್ದು ಪ್ರಸ್ತುತ ಇರುವ 100 ಬೆಡ್ ಬಂಟ್ವಾಳ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಶಾಸಕರು ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದ್ದಾರೆ.

ಸರಕಾರದ ಸಚಿವರ ಜೊತೆಗೆ ಶಾಸಕರು ಪ್ರಥಮ ಸುತ್ತಿನ ಮಾತುಕತೆ ನಡೆಸಿದ್ದು, ಈಗಾಗಲೇ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಿ ರುವ ಆಸ್ಪತ್ರೆಯ ಕಟ್ಟಡ ವಿಸ್ತರಣೆಯ ಬಗ್ಗೆ ಹಾಗೂ ಇತರ ಆಸ್ಪತ್ರೆಯ ವಿವಿಧ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ಕುಮಾರ್ ಅವರು ಸೋಮವಾರ ಪರಿಶೀಲನೆ ನಡೆಸಿದರು.

ಪ್ರಸ್ತುತ ಇರುವ ಬಂಟ್ವಾಳ ಸರಕಾರಿ ಆಸ್ಪತ್ರೆಯ ಮಹಡಿಯ ಮೇಲೆಯೇ ಕಟ್ಟಡ ವಿಸ್ತರಣೆ ಮಾಡುವ ಯೋಜನೆ ತಯಾರಿ ನಡೆಯುತ್ತಿದ್ದು, ಆಸ್ಪತ್ರೆಯ ಆವರಣದಲ್ಲಿನ ಕಟ್ಟಡಗಳ ನವೀಕರಣ ಮೊದಲಾದ ವಿಚಾರಗಳ ಕುರಿತು ಪರಿಶೀಲನೆ ನಡೆಸಲಾಯಿತು. ಆಸ್ಪತ್ರೆಯ ಮೇಲ್ದರ್ಜೆಗೇರಿಸುವ ಕುರಿತು ಶಾಸಕರು, ಡಿಎಚ್‌ಒ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪುಷ್ಪಲತಾ ಅವರ ಜತೆ ಚರ್ಚೆ ನಡೆಸಿದರು.

ಆಸ್ಪತ್ರೆಗೆ ಹೆಚ್ಚಿನ ಡಯಾಲಿಸೀಸ್ ಯಂತ್ರಗಳ ಅನುಷ್ಠಾನದ ದೃಷ್ಟಿಯಿಂದ ಹೆಚ್ಚಿನ ಸ್ಥಳಾವಕಾಶ ಬೇಕಿರುವುದರಿಂದ ಆಸ್ಪತ್ರೆಯ ಆಡಳಿತ ಕಚೇರಿಯನ್ನು ವೈದ್ಯಾಧಿಕಾರಿಗಳ ಖಾಲಿ ಇರುವ ವಸತಿ ಗೃಹಕ್ಕೆ ಸ್ಥಳಾಂತರ ಮಾಡುವ ಕುರಿತು ಶಾಸಕರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರಿದ್ದರು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...