Friday, July 11, 2025

ಬಂಟ್ವಾಳ ಸರಕಾರಿ ಆಸ್ಪತ್ರೆಯ ಆಕ್ಸಿಜನ್ ಉತ್ಪಾದನಾ ಘಟಕ ಜುಲೈ 13 ರಂದು ಉದ್ಘಾಟನೆ

ಬಂಟ್ವಾಳ: ಕೊರೊನಾ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗಗಳ ಸರಕಾರಿ ಆಸ್ಪತ್ರೆ-ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಬಂಟ್ವಾಳ ತಾಲೂಕಿನ ೨ನೇ ಆಕ್ಸಿಜನ್ ಘಟಕ ಜು. ೧೩ರಂದು ಬಂಟ್ವಾಳ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.

ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಈಗಾಗಲೇ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಆಕ್ಸಿಜನ್ ಘಟಕ ಉದ್ಘಾಟನೆಗೊಂಡಿದ್ದು, ಸರಕಾರಿ ಆಸ್ಪತ್ರೆಯ ಘಟಕದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.

ಘಟಕದ ಕಾರ್ಯಾರಂಭಕ್ಕೆ ಪೂರ್ವಭಾವಿಯಾಗಿ ಶನಿವಾರ ಅಽಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಘಟಕದ ಕಾರ್ಯಾರಂಭದ ಕುರಿತು ಆಸ್ಪತ್ರೆಯ ಆಡಳಿತ ವೈದ್ಯಾಽಕಾರಿ ಡಾ| ಪುಷ್ಪಲತಾ ಅವರ ಸಮ್ಮುಖದಲ್ಲಿ ಪರಿಶೀಲನಾ ಕಾರ್ಯ ನಡೆಸಿದೆ. ಈಗಾಗಲೇ ಘಟಕದ ಯಂತ್ರೋಪಕರಣಗಳನ್ನು ಜೋಡಿಸಲಾಗಿದ್ದು, ಅವುಗಳ ಜೋಡಣಾ ಕಾರ್ಯ ಹಾಗೂ ಇನ್ನು ನಡೆಯಬೇಕಾದ ಕಾರ್ಯಗಳ ಕುರಿತು ಪರಿಶೀಲಿಸಿದೆ.

ಪ್ರಾರಂಭದಲ್ಲಿ ಆಸ್ಪತ್ರೆಗೆ ನಿಮಿಷಕ್ಕೆ ೮೦ ಲೀ. ಆಕ್ಸಿಜನ್ ಉತ್ಪಾದನಾ ಘಟಕದ ಅನುಷ್ಠಾನಕ್ಕೆ ಸಿದ್ಧತೆ ನಡೆದಿದ್ದರೂ, ಬಳಿಕ ಹೆಚ್ಚಿನ ಬೇಡಿಕೆಯ ಹಿನ್ನೆಲೆಯಲ್ಲಿ ಸಾಮರ್ಥ್ಯದ ನಿಮಿಷಕ್ಕೆ ೫೦೦ ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯದ ಘಟಕವನ್ನು ಅನುಷ್ಠಾನಗೊಳಿಸಲು ಸಿದ್ಧತೆ ಮಾಡಲಾಗಿತ್ತು.

ಆಸ್ಪತ್ರೆಯ ಆಕ್ಸಿಜನ್ ಸಿಲಿಂಡರ್‌ಗಳ ಫಿಲ್ಲಿಂಗ್, ಐಸಿಯು, ವೆಂಟಿಲೇಟರ್‌ಗಳ ಕಾರ್ಯಾಚರಣೆಗೆ ಘಟಕ ಅನುಷ್ಠಾನದಿಂದ ಪ್ರಯೋಜನವಾಗಿದ್ದು, ಗುಣಮಟ್ಟದ ಆರೋಗ್ಯಸೇವೆ ಲಭ್ಯವಾಗಲಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...