Wednesday, June 25, 2025

ಕೃಷಿ ಬೆಳೆದಾಗ ದೇಶ ಬೆಳೆಯಲು ಸಾಧ್ಯ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದೇಶದ 60-70 ಶೇ. ಮಂದಿ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದು, ಕೃಷಿ ಬೆಳೆದಾಗ ಮಾತ್ರ ದೇಶ ಬೆಳೆಯಲು ಸಾಧ್ಯ. ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳಲ್ಲಿ ಬದಲಾವಣೆ ತಂದಿದ್ದು, ರೈತರ ಕಮಿಷನ್‌ನಲ್ಲಿ ಆದಾಯ ಪಡೆಯುವವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

 

ಅವರು ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದರು. ರೈತರ ವಿಶ್ವಾಸಗಳಿಸುವ ನಿಟ್ಟಿನಲ್ಲಿ ರೈತರ ಮನೆಗಳಲ್ಲೇ ಮೋರ್ಚಾದ ಸಭೆಗಳನ್ನು ಸಂಘಟಿಸುವ ಕೆಲಸ ಮಾಡಿ. ನಾವು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ ಪ್ರಧಾನಿಗಳ ಬಲಿಷ್ಠ ಭಾರತ ನಿರ್ಮಾಣದ ಕನಸು ನನಸಾಗುತ್ತದೆ ಎಂದರು.
ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ಚಿದಾನಂದ, ಪಕ್ಷದ ಮುಂದಾಳು ಮಾಧವ ಮಾವೆ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಮಜಲು, ಬಂಟ್ವಾಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಸಜೀಪ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಸ್ವಾಗತಿಸಿದರು. ಪ್ರಣಾಮ್ ಅಜ್ಜಿಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...