Tuesday, July 15, 2025

ಸಮಾಜವನ್ನು ಒಗ್ಗೂಡಿಸುವ ಶಕ್ತಿ ದೇವಾಲಯಗಳಿಗಿವೆ ಕಶೆಕೋಡಿ ಸೂರ್ಯನಾರಾಯಣ ಭಟ್ ಅಭಿಪ್ರಾಯ

ಬಂಟ್ವಾಳ: ಬ್ರಹ್ಮಕಲಶದಿಂದ ಸಮಾಜದ ನವನಿರ್ಮಾಣವಾಗುವುದು. ಸಾನಿಧ್ಯಾಭಿವೃದ್ಧಿಯಿಂದ ಸಮಾಜಕ್ಕೆ ಕ್ಷೇಮ. ದೇವಸ್ಥಾನ ಇಡೀ ಸಮಾಜಕ್ಕೆ ಸಂಸ್ಕಾರ ಕೊಡುವ ಕೇಂದ್ರ. ಇದರಿಂದ ಯಾವುದೇ ಜಾತಿ ಮತ ಬೇಧವಿಲ್ಲದೆ ಇಡೀ ಸಮಾಜವನ್ನು ಒಗ್ಗೂಡಿಸಲು ಸಾಧ್ಯವಾಗುವುದು ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ನುಡಿದರು.
ಅವರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ದೇವಳದ ರಾಜಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
2022 ಫೆಬ್ರವರಿಯಲ್ಲಿ ದೇವಳಕ್ಕೆ ಬ್ರಹ್ಮಕಲಶೋತ್ಸವ ನಡೆಸುವುದಾಗಿ ನಿರ್ಧರಿಸಿದ್ದು, ಈ ಬಗ್ಗೆ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮುಂಡಾಜೆಗುತ್ತು ನವೀನ್ ಚಂದ್ರ ಶೆಟ್ಟಿ ಗೌರವಾಧ್ಯಕ್ಷರಾಗಿ ಹಾಗೂ ಸದಾನಂದ ಶೆಟ್ಟಿ ರಂಗೋಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಳಿದಂತೆ ಗಣೇಶ್ ಸುವರ್ಣ ತುಂಬೆ ಪ್ರಧಾನ ಕಾರ್ಯದರ್ಶಿ, ತೇವು ತಾರನಾಥ ಕೊಟ್ಟಾರಿ ಸಂಚಾಲಕರಾಗಿ ಹಾಗೂ ಕವಿರಾಜ್ ಚಂದ್ರಿಗೆ ಕೋಶಾಧಿಕಾರಿಯಾಗಿ ಆಯ್ಕೆಯಾದರು. ಉಳಿದಂತೆ ಗೌರವಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿಗಳನ್ನು ಮತ್ತು ಉಪಸಮಿತಿಗಳನ್ನು ರಚಿಸಲಾಯಿತು.

ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಅರ್ಚಕರಾದ ರಾಧಾಕೃಷ್ಣ ಕಡಂಬಳಿತ್ತಾಯ, ಶಿವರಾಮ ಶಿಬರಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಊರಹತ್ತು ಸಮಸ್ತರು ಹಾಗೂ ಕಳ್ಳಿಗೆ, ತುಂಬೆ, ಬಿ.ಮೂಡ, ನಡು ಗ್ರಾಮದಿಂದ ಸುಮಾರು 300ಕ್ಕೂ ಅಧಿಕ ಗ್ರಾಮಸ್ಥರು ಉಪಸ್ಥಿತರಿದ್ದು, ಸಭೆ ಯಶಸ್ವಿಯಾಗಿ ನೆರವೇರಿತು. ಗ್ರಾಮಸ್ಥರ ಭಾಗವಹಿಸುವಿಕೆಯನ್ನು ಗಮನಿಸಿದ ಅತಿಥಿಗಳೆಲ್ಲರೂ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯುವ ಮುನ್ಸೂಚನೆ ದೊರೆತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

More from the blog

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...