Friday, June 27, 2025

2021 ವರ್ಷದಲ್ಲಿ ಒಟ್ಟು 12 ಪ್ರಕರಣ ಭೇಧಿಸಿ 17,33,000 ಸಾವಿರ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ನಗರ ಠಾಣಾ ಪೋಲೀಸರು

ಬಂಟ್ವಾಳ: ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತ್ರತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12 ಪ್ರಕರಣಗಳನ್ನು ಭೇಧಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ .

2021 ನೇ ವರ್ಷದಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ , ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿ ಒಟ್ಟು 17 ಲಕ್ಷದ 33 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ವಿವಿಧ ಪ್ರಕರಣಗಳಲ್ಲಿ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಇಂದು ನ.22 ರಂದು ಸಹಾಯಕ ಪೋಲೀಸ್ ಅಧೀಕ್ಷಕ ಶಿವಾಂಷು ರಜಪೂತ್ ಐ.ಪಿ‌.ಎಸ್.ಅವರು ವಾರಸುದಾರ ರಿಗೆ ಹಸ್ತಾಂತರ ಮಾಡಿದರು.

11,3400 ರೂ ಮೌಲ್ಯದ 252.390 ಗ್ರಾಂ.ತೂಕ ದ ಚಿನ್ನಾಭರಣಗಳು, 5,49,00 ಮೌಲ್ಯದ ಬೋಲೇರೊ ಜೀಪ್, ಒಂದು ಆಲ್ಟೋ ಕಾರು, ಒಂದು ಮೋಟಾರ್ ಸೈಕಲ್, ರೂ.50000 ಮೌಲ್ಯದ ಲ್ಯಾಪ್ ಟಾಪ್ ಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣಗಳನ್ನು ಭೇಧಿಸುವಲ್ಲಿ ಯಶಸ್ವಿಯಾಗಿ ದ್ದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಅವರ ನಿರ್ದೇಶನದಂತೆ , ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಡಾ! ಶಿವಕುಮಾರ್ ಗುಣಾರೆರವರ ಮಾರ್ಗದರ್ಶನ ದಲ್ಲಿ , ಬಂಟ್ವಾಳ ಎ.ಎಸ್.ಪಿ.ಶಿವಾಂಷು ರಜಪೂತ್ ಐ.ಪಿ.ಎಸ್.ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಹಾಗೂ ಬಂಟ್ವಾಳ ನಗರ ಠಾಣಾ ಎಸ್ ‌ಐ.ಅವಿನಾಶ್ ಮತ್ತು ಸಿಬ್ಬಂದಿಯ ವರು ಪಾಲ್ಗೊಂಡಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...