ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 189ನೇ ಹನೀಫ್ ಅವರ ಅದ್ಯಕ್ಷತೆಯಲ್ಲಿ ತೆಂಗಿನ ಸಸಿಯನ್ನು ನೀಡಿ “ನಮ್ಮ ನಡೆ ಬೂತ್ ಕಡೆ”ಕಾರ್ಯಕ್ರಮ ನಡೆಯಿತು.



ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಆರ್ಷದ್ ಶರವು, ತಾಲೂಕ್ ಪಂಚಾಯತ್ ಮಾಜಿ ಸದಸ್ಯರಾದ ಸಂಜೀವ ಪೂಜಾರಿ, ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀನಾಕ್ಷಿ, ಉಪಾಧ್ಯಕ್ಷರಾದ ಸಿದ್ದೀಕ್ ಕೊಳಕೆ, ವಲಯ ಅಧ್ಯಕ್ಷರಾದ ಎನ್. ಅಬ್ದುಲ್ ಕರೀಂ, ಬೂತ್ ಅಧ್ಯಕ್ಷ ರಾದ ಹನೀಫ್ ಜಾಡಕೋಡಿ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

