ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇವರ ಸಹಯೋಗದಲ್ಲಿ ನವಜೀವನ ಸಮಿತಿಯ ಪೋಷಕರ ತರಬೇತಿ ಕಾರ್ಯಕ್ರಮ ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಪ್ರಕಾಶ ಕಾರಂತ ಅವರು ತರಬೇತಿ ಕಾಾರ್ಯಕ್ರಮ ಉದ್ಘಾಟಿಸಿ, ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು.

ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕರಾದ ವಿವೇಕ್ ವಿ. ಪಾಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬಂಟ್ವಾಳದಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಮದ್ಯ ವರ್ಜಿತರಾಗಿ ನವಜೀವನವನ್ನು ಕಂಡುಕೊಂಡ ಸದಸ್ಯರು ಒಂದೊಂದು ಶಿಬಿರವನ್ನು ನಡೆಸಲು ಸಾಧ್ಯವಾದಲ್ಲಿ ಮಾತ್ರ ಅವನ ಜೀವನ ಪಾವನವಾಗುವುದು ಎಂದು ತಿಳಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಇವರು ನವಜೀವನ ಸಮಿತಿಗೆ ಪೋಷಕರನ್ನು ಆಯ್ಕೆ ಮಾಡಿದರು. ಶಿಬಿರಾಧಿಕಾರಿ ವಿದ್ಯಾಧರ್ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ್ ಪಿ. ಕಾರ್ಯಕ್ರಮ ನಿರೂಪಿಸಿದರು.