Wednesday, February 12, 2025

ಮೋದಿ, ರಾಹುಲ್ ವಿರುದ್ಧ ಪುತ್ತೂರು ಯು.ಪಿ.ಶಿವಾನಂದ ಸ್ಪರ್ಧೆ

ಬಂಟ್ವಾಳ: ದ.ಕ.ಜಿಲ್ಲೆಯ ಪುತ್ತೂರು ಪ್ರತಿಷ್ಠಿತ ಪತ್ರಿಕೆಯ ಸಂಪಾದಕ ಪ್ರಧಾನಿ ಅಭ್ಯರ್ಥಿ ಗಳ ವಿರುದ್ದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುದ್ದಿ ಬಿಡುಗಡೆ ಪತ್ರಿಕೆ ಯ ಪ್ರಧಾನ ಸಂಪಾದಕ ಡಾ| ಯು.ಪಿ.ಶಿವಾನಂದ ಅವರು ಇವರಿಬ್ಬರ ವಿರುದ್ಧ ಸ್ಪರ್ಧೆಗೆ ರೆಡಿಯಾಗಿದ್ದಾರೆ.

ಆಡಳಿತವು ‘ದಿಲ್ಲಿಯಿಂದ ಹಳ್ಳಿಗಲ್ಲ, ಹಳ್ಳಿಯಿಂದ ದಿಲ್ಲಿಗೆ’ ಎಂಬುದನ್ನು ಪ್ರತಿಪಾದಿಸುವ ಸಲುವಾಗಿ ರಾಷ್ಟ್ರದ ಪ್ರಮುಖ ನಾಯಕರಾದ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯ ವಿರುದ್ಧ ಸ್ಪರ್ಧಿಸುವುದಾಗಿ ಸುಳ್ಯ ಮೂಲದ ‘ಸುದ್ದಿ ಬಿಡುಗಡೆ’ ಪತ್ರಿಕೆಯ ಪ್ರಧಾನ ಸಂಪಾದಕ ಡಾ.ಯು.ಪಿ.ಶಿವಾನಂದ ಘೋಷಿಸಿದ್ದಾರೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯ ಗ್ರಾಮ ಸ್ವರಾಜ್ಯ ಮತ್ತು ರಾಮರಾಜ್ಯದ ಕನಸನ್ನು ನನಸು ಮಾಡುವ ಸಲುವಾಗಿ ತಾನು ಜನಜಾಗೃತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಬಲತ್ಕಾರದ ಭಾರತ್ ಬಂದ್ ಮತ್ತು ನೇತ್ರಾವತಿ ನದಿ ತಿರುವು ಯೋಜನೆಯ ವಿರುದ್ಧವೂ ಗ್ರಾಮೀಣ ಭಾಗದಲ್ಲಿ ತನ್ನದೇ ಆದ ರೀತಿಯಲ್ಲಿ ಹೋರಾಟ ಮಾಡುತ್ತಾ ಬಂದಿದ್ದೇನೆ. ವಸ್ತುಸ್ಥಿತಿಯ ಅರಿವು ಇದ್ದರೂ ಕೂಡ ಸ್ಥಳೀಯ ನಾಯಕರು ದಿಲ್ಲಿ ರಾಜಕಾರಣದ ವಿರುದ್ಧ ಸೊಲ್ಲೆತ್ತಲಾಗದೆ ಪರಿತಪಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ನಾಯಕರಿಗಿಂತಲೂ ರಾಷ್ಟ್ರಮಟ್ಟದ ನಾಯಕರ ಗಮನಸೆಳೆಯುವ ಸಲುವಾಗಿ ತಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.
ಈ ಬಗ್ಗೆ ತಾನು ಈಗಾಗಲೆ ಸಮಾನಮನಸ್ಕರು, ಚಿಂತಕರ ಜೊತೆ ಸಮಾಲೊಚನೆ ಮಾಡಿದ್ದೇನೆ. ಅಮೇಠಿಗೆ ತೆರಳಿ ಅಲ್ಲಿನ ಜನರೊಂದಿಗೆ ಚರ್ಚೆ ನಡೆಸಿದ್ದೇನೆ. ಮುಂದೆ ವಾರಣಾಸಿಗೂ ತೆರಳುವೆ. ಈ ಎರಡೂ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿ ಬಳಿಕ ಅಲ್ಲೇ ಪ್ರಚಾರ ಕಾರ್ಯ ಮಾಡಲಿದ್ದೇನೆ ಎಂದು ಡಾ.ಯು.ಪಿ.ಶಿವಾನಂದ ಹೇಳಿದರು.ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷಗಳಾದರೂ ಬ್ರಿಟಿಷರ ಕಾಲದ ಆಡಳಿತದ ದಾಸ್ಯದಿಂದ ನಾವು ಮುಕ್ತವಾಗಿಲ್ಲ. ಬಹುತೇಕ ಕಾನೂನುಗಳಲ್ಲೂ ಬ್ರಿಟಿಷರ ಕಾಲದ ಆಡಳಿತ ಛಾಯೆ ಇದೆ. ಇಲ್ಲಿ ಪ್ರಜೆಗಳೇ ಪ್ರಭುಗಳಾಗಿಲ್ಲ. ನಮ್ಮ ಧ್ವನಿಯಾಗಲು ನಾವು ಆಯ್ಕೆ ಮಾಡಿದ ಜನಪ್ರತಿನಿಧಿಯು ದಿಲ್ಲಿಯ ಆದೇಶಗಳಿಗೆ ಕಾಯುವಂತಹ ಪರಿಸ್ಥಿತಿ ಇದೆ. ಇದನ್ನು ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿರುವೆ. ದೇಶದ ರಾಜಧಾನಿ ಹೊಸದಿಲ್ಲಿಯಿಂದ ನಮ್ಮ ಬಳಗದ ಪರವಾಗಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಡಾ.ಯು.ಪಿ.ಶಿವಾನಂದ ನುಡಿದರು.
ಸುದ್ದಿಗೋಷ್ಠಿಯಲ್ಲಿ ‘ಸುದ್ದಿ ಬಿಡುಗಡೆ’ ಬಳಗದ ಸಂತೋಷ್ ಕುಮಾರ್ ಶಾಂತಿನಗರ, ಉಮೇಶ್ ಮಿತ್ತಡ್ಕ, ಹರೀಶ್ ಬಂಟ್ವಾಳ್, ಭಾಸ್ಕರ ರೈ, ಸನ್ಮಾನ್ ಮಾಧವ ಭಾಗಮಂಡಲ, ಸಿಂಚನ್ ಉರಿಬೈಲ್, ಸೃಜನ್ ಉರಿಬೈಲ್ ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...