ಬಂಟ್ವಾಳ : ವಕೀಲರ ಸಂಘ ಇದರ 2018-19ನೇ ಸಾಲಿನ ವಾರ್ಷಿಕ ಸ್ನೇಹಮಿಲನ ಕಾರ್ಯಕ್ರಮವು ಬಿ.ಸಿ.ರೋಡ್ ನ ಸ್ಪರ್ಶಾ ಕಲಾ ಮಂದಿರದಲ್ಲಿ ಜರಗಿತು. ವಕೀಲರು ದಿನದ 24 ಗಂಟೆಯು ಕೋರ್ಟ್ ಕಛೇರಿ ಇತ್ಯಾದಿ ಕೆಲಸಗಳಲ್ಲಿ ನಿರತರಾಗಿರುತ್ತಾರೆ . ಇದರಿಂದ ವಕೀಲರ ನಡುವಿನ ಸಂವಾದ , ಆತ್ಮೀಯತೆ ಮತ್ತು ಕುಟುಂಬ ಸದಸ್ಯರ ಬೆರೆಯುವಿಕೆ, ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಕಾರ್ಯಕ್ರಮ ಅನುಕೂಲವಾಗುತ್ತದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಝ್ ಅಹ್ಮದ್ ಉದ್ಘಾಟಿಸಿ ಮಾತನಾಡಿದರು.

ವಕೀಲರಲ್ಲಿ ಒಂದಲ್ಲ ಒಂದು ಪ್ರತಿಭೆ ಇರುತ್ತದೆ ಇಂತಹ ಕಾರ್ಯಕ್ರಮದ ಮೂಲಕ ನೋಡ ವ ಭಾಗ್ಯ ನಮಗೆ ಲಭಿಸಿದೆ ಎಂದು ಮುಖ್ಯ ಅತಿಥಿಗಳಾಗಿ ಮಾತನಾಡಿದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಡಿ.ಆರ್ ಎಂದು ನುಡಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಶಿಲ್ಪಾ ಜಿ.ತಿಮ್ಮಾಪುರ್ , ಸಂಘದ ಉಪಾಧ್ಯಕ್ಷ ಚಂದ್ರಶೇಖರ ರಾವ್ ಪುಂಚಮೆ, ನ್ಯಾಯವಾದಿ ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.
ನ್ಯಾಯವಾದಿ ಶ್ವೇತಾ ಶೆಟ್ಟಿ ಸ್ವಾಗತಿಸಿದರು. ನ್ಯಾಯವಾದಿ ಅಮೃತಾ ವಂದಿಸಿ ನ್ಯಾಯವಾದಿ ದೀಪಕ್ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಯಕ್ಷ-ಗಾನ ವೈಭವ , ಯೋಗದ ವಿವಿಧ ಕಸರತ್ತುಗಳ ಪ್ರದರ್ಶನ, ವಿವಿಧ ಸಾಂಸ್ಕೃತಿ ಕ ವಿನೋದಾವಳಿ ಕಾರ್ಯಕ್ರಮ ಜರಗಿತು.