Monday, February 2, 2026

ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ: ಮಹಿಳೆ ಸಾವು

ಬಂಟ್ವಾಳ: ಪಾದಚಾರಿ ಮಹಿಳೆಯೋರ್ವಳು ರಸ್ತೆ ದಾಟುವ ವೇಳೆ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ಸರೋಜಿನಿ (58) ಮೃತ ಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಸರೋಜಿನಿ ಅವರು ಕೆಲಸ ಮುಗಿಸಿ ಮನೆಗೆ ಹೊರಟು ಹೋಗುವ ವೇಳೆ ಪಾಣೆಮಂಗಳೂರು ಮಾಂಡೋವಿ ಮೋಟಾರು ಶೋ ರೂಮ್ ನ ಎದುರುಗಡೆ ರಸ್ತೆಯನ್ನು ದಾಟುವ ವೇಳೆ ಕೆ.ಎಸ್.ಆರ್.ಟಿ.ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಸರೋಜಿನಿ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿ ರಸ್ತೆಯಲ್ಲಿದ್ದರು. ಆ ವೇಳೆ ಆಸ್ಪತ್ರೆಗೆ ದಾಖಲು ಮಾಡಲು ಯಾವುದೇ ವಾಹನ ಸಿಗದೆ ಇದ್ದ ಕಾರಣ ಘಟನಾ ಸ್ಥಳಕ್ಕೆ ಬೇಟಿ ನೀಡಿದ್ದ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ. ಅವರು ಕೂಡಲೇ ಕಚೇರಿ ವಾಹನದಲ್ಲಿ ಹಾಕಿಕೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ತಲೆಗೆ ಗಂಭೀರ ಪ್ರಮಾಣದ ಗಾಯವಾದ್ದರಿಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .

More from the blog

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...

ಬಿ.ಸಿ.ರೋಡ್ : ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ:  ಹಿಂದು ಸಂಗಮ ಆಯೋಜನಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಹಾಕಾಳಿಬೆಟ್ಟು ಮೈದಾನದಲ್ಲಿ ಭಾನುವಾರ ಸಂಜೆ ಹಿಂದು ಸಂಗಮ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಶಂಖ, ಕಲಶ, ಭಾರತಮಾತೆಯ ಭಾವಚಿತ್ರದ ವಾಹನ, ವೀರ ಪುರುಷರ ವೇಷ, ಚೆಂಡೆ,...