ಬಂಟ್ವಾಳ: ಮಂಗಳವಾರ ರಾತ್ರಿ ಅರಣ್ಯ ಇಲಾಖೆಗೆ ಸಂಬಂಧಿಸಿದ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಪಾದಚಾರಿಯ ಗುರುತು ಪತ್ತೆ ಇನ್ನೂ ಕೂಡ ಆಗಿಲ್ಲ ಎಂದು ಪೋಲೀಸ್ ಇಲಾಖೆ ಮಾಹಿತಿ ನೀಡಿದೆ.

ರಾತ್ರಿ ಸುಮಾರು 8 ಗಂಟೆಗೆ ಪರಂಗಿಪೇಟೆ ರಿಕ್ಷಾ ಪಾರ್ಕ್ ಮುಂಭಾಗದಲ್ಲಿ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದು ಪಾದಚಾರಿಯ ಸಾವು ಸಂಭವಿಸಿತ್ತು.
ಪಾದಚಾರಿ ವ್ಯಕ್ತಿಯ ಶವವನ್ನು ಮಂಗಳೂರಿನ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದ್ದು, ಅಪರಿಚಿತ ವ್ಯಕ್ತಿಯ ಶವದ ಗುರುತು ಪತ್ತೆಗಾಗಿ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.