Wednesday, January 28, 2026

ಹಿಂದೂ ಸಂಘಟನೆಯ ವತಿಯಿಂದ ಹಡೀಲು ಬಿದ್ದಿರುವ ಗದ್ದೆಯಲ್ಲಿ ಭತ್ತದ ಕೃಷಿ ಕಾರ್ಯ

ಬಂಟ್ವಾಳ: ಲಾಕ್ ಡೌನ್ ಅವಧಿಯಲ್ಲಿ ಸರಪಾಡಿಯ ಸಂಘಟನೆಯೊಂದು ಭತ್ತದ ಕೃಷಿಯ ಕೆಲಸಕ್ಕೆ ನಾಂದಿಯಾಡಿದೆ.
ಸುಮಾರು ವರ್ಷಗಳಿಂದ ಹಡೀಲು ಬಿದ್ದಿರುವ ಗದ್ದೆಯೊಂದನ್ನು ಮಾಲಕರಿಂದ ಉಚಿತವಾಗಿ ಪಡೆದು ಭತ್ತದ ಕೃಷಿ ಕಾರ್ಯ ನಡೆಸಿದೆ.
ಉಚಿತವಾಗಿ ಪಡೆದ ಗದ್ದೆಯಲ್ಲಿ ಭತ್ತದ ಕೃಷಿ ಮಾಡಿ ಫಸಲನ್ನು ಸಮಾಜದ ಬಡವರ್ಗದ ಜನರಿಗೆ ನೀಡುವ ಉದ್ದೇಶದಿಂದ ಸಂಘಟನೆ ಮುಂದಾಗಿದ್ದು, ಇವರ ಈ ಉತ್ತಮ ಕಾರ್ಯಕ್ಕೆ ಗ್ರಾಮದ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ.

ವಿಶ್ವ ಹಿಂದು ಪರಿಷತ್ತ್ ಭಜರಂಗದಳ ಜೈ ಹನುಮಾನ್ ಶಾಖೆ ಅಜಿಲಮೊಗರು ಸಂಘಟನೆಯ ವತಿಯಿಂದ ಹಡೀಲು ಬಿದ್ದಿರುವ ಗದ್ದೆಯಲ್ಲಿ ವ್ಯವಸಾಯ‌ ಮಾಡಲಾಯಿತು.

 

ಉದ್ದೇಶ:  ಬಡಜನರಿಗೆ ಸಹಾಯ ಮಾಡಬೇಕು ಎಂಬ ಉತ್ತಮ ಉದ್ದೇಶವನ್ನಿಟ್ಟುಕೊಂಡು ಸಂಘಟನೆಯ ಪ್ರಮುಖರು ಸರಪಾಡಿಯಲ್ಲಿ ಅನೇಕ ವರ್ಷಗಳಿಂದ ಹಡೀಲು ಬಿದ್ದಿದ್ದ ನವೀನ್ ಶಾಂತಿ ಎಂಬವರ 4 ಮುಡಿ ಹಡೀಲು ಗದ್ದೆಯನ್ನು ಉಚಿತವಾಗಿ ಪಡೆದು ನೇಜಿ ಕೃಷಿ ಮಾಡಿದರು.
ಈ ಗದ್ದೆಯಲ್ಲಿ ಬರುವ ಅಕ್ಕಿ ಯನ್ನು  ಕಡುಬಡವರಿಗೆ ವಿತರಿಸುವುದು ಹಾಗೂ ಬೈ ಹುಲ್ಲನ್ನು ಗೋ ಶಾಲೆಗೆ ನೀಡುವುದೆಂದು ತಿರ್ಮಾನಿಸಿ ಈ ಸಂಘಟನೆ ಕೃಷಿ ಕಾರ್ಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸ.ಸಂಚಾಲಕ್ ಗುರುರಾಜ್ ಬಂಟ್ವಾಳ್, ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಪ್ರಖಂಡ ಸ.ಸಂಚಾಲಕ್ ಸಂತೋಷ್ ಕುಲಾಲ್, ಪ್ರಗತಿಪರ ಕೃಷಿಕ ಪುರುಷೋತ್ತಮ ಪೂಜಾರಿ ಮಜಲು ಹಾಗೂ ಸ್ಥಳ ಧಾನಿಗಳು ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...