Thursday, February 13, 2025

ಪೊಲೀಸ್ ಲೈನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವ ಕಾರ್ಯಕ್ರಮಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿ.ಸಿ.ರೋಡ್ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶನಿವಾರ ಬೆಳಗ್ಗೆ ಚಾಲನೆ ನೀಡಿದರು. ದೇವಸ್ಥಾನದ ಅಭಿವೃದ್ಧಿ ಸುಂದರವಾಗಿದ್ದು, ಆಕರ್ಷಣೀಯವಾಗಿದೆ. ಸಮಿತಿ ಮತ್ತು ಸಂಬಂಧಿಸಿದ ಸದಸ್ಯರಿಗೆ ಅಭಿನಂದನೆ, ಭಕ್ತರಿಗೆ ತಾಯಿಯ ಆಶೀರ್ವಾದ ಸದಾ ಇರಲಿ ಎಂದು ಈ ಸಂದರ್ಭ ಅವರು ಶುಭ ಹಾರೈಸಿದರು.

ಇದೇ ವೇಳೆ ಯಾಗಶಾಲೆಯನ್ನು ನಿವೃತ್ತ ತಹಸೀಲ್ದಾರ್ ಕೆ.ಮೋಹನ ರಾವ್ ಉದ್ಘಾಟಿಸಿದರೆ, ಸೇವಾ ಕಚೇರಿಯನ್ನು ಶ್ರೀ ಅಣ್ಣಪ್ಪ ಪಂಜುರ್ಲಿ ಬಂಟ ದೈವಸ್ಥಾನ ಮಂಗ್ಲಿಮಾರ್ ನ ಆಡಳಿತ ಮೊಕ್ತೇಸರರಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು ಉದ್ಘಾಟಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ ನರಿಕೊಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ, ಗೌರವಾಧ್ಯಕ್ಷ ಅಶ್ವನಿ ಕುಮಾರ್ ರೈ, ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ ಮೊಡಂಕಾಪು, ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ದಿನೇಶ್ ಕುಮಾರ್, ಕಾನೂನು ಸಲಹೆಗಾರರಾದ ಉಮೇಶ್ ಕುಮಾರ್ ವೈ, ನರೇಂದ್ರನಾಥ ಭಂಡಾರಿ, ಪ್ರಧಾನ ಅರ್ಚಕ ಮಾದಕಟ್ಟೆ ಈಶ್ವರ ಭಟ್, ಉಪಾಧ್ಯಕ್ಷ ಆನಂದ ಕೆ, ಕೇಪು ಗೌಡ, ಆಡಳಿತ ಸಮಿತಿ ಸದಸ್ಯರಾದ ಕೃಷ್ಣ ಕುಲಾಲ್, ಚಂದ್ರಹಾಸ ಶೆಟ್ಟಿ, ಸದಾಶಿವ ಬಂಗೇರ, ಸೀತಾರಾಮ, ಬಾಲಕೃಷ್ಣ ಗೌಡ, ಜಯಕುಮಾರ್, ಪುಷ್ಪರಾಜ ಶೆಟ್ಟಿ, ನಾನಾ ಸಮಿತಿಗಳ ಪ್ರಮುಖರಾದ ಇಂದಿರೇಶ್, ಬಿ.ದೇವದಾಸ ಶೆಟ್ಟಿ, ಬೇಬಿ ಕುಂದರ್, ಪುರುಷ ಸಾಲ್ಯಾನ್, ದೇವಪ್ಪ ಕುಲಾಲ್, ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು. ವಿವೇಕ್ ರೈ ಕಾರ್ಯಕ್ರಮ ನಿರ್ವಹಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...