ಬಂಟ್ವಾಳ: ಬೇರೆ ಬೇರೆ ಭಾಗದಿಂದ ಕಳ್ಳಮಾರ್ಗದಿಂದ ಯಥೇಚ್ಛವಾಗಿ ಅಡಿಕೆ ಗಡಿಭಾಗದಿಂದ ಬರುತ್ತಿದ್ದು,ಇದನ್ನು ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾದ ಪರಿಣಾಮವಾಗಿ ಅಡಿಕೆಬೆಲೆ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಜಿಲ್ಲೆಯ ಎಲ್ಲಾ ರೈತ ಒಕ್ಕೂಟ ಅಡಿಕೆ ಆಮದು ನಿಷೇಧಿಸುವಂತೆ ಹಾಗೂ ಇತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾ.7 ರಂದು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಪೂರ್ವಭಾವಿಯಾಗಿ ಅದೇ ದಿನ ಮಧ್ಯಾಹ್ನ 2 ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯಿಂದ ಟ್ರ್ಯಾಕ್ಟರ್ ಹಾಗೂ ವಾಹನದ ಜಾಥದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದೇವೆ ಎಂದು ರೈತ ಒಕ್ಕೂಟದ ಪ್ರಮುಖರಾದ ಓಸ್ವಾಲ್ಡ್ ಫರ್ನಾಂಡೀಸ್ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಅವರು ತಿಳಿಸಿದರು.
ಜಾಗತೀಕರಣದಿಂದ ವಿಶ್ವವಾಣಿಜ್ಯ ವ್ಯಾಪಾರ ಸಂಸ್ಥೆ WTO ಒಪ್ಪಂದದೊಂದಿಗೆ ರೈತ ವಿರೋಧಿ ನೀತಿಗಳಿಂದಾಗಿ ರೈತರು ಸಾಲಗಾರರಿಗೆ ಮೂರುವರೆ ಲಕ್ಷಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ದ.ಕ.ಜಿಲ್ಲೆಯ ರೈತರು ಅಡಿಕೆ ಮತ್ತು ತೆಂಗು ಬೆಲೆಯನ್ನು ನಂಬಿ ಬದುಕುತ್ತಿದ್ದು, ಅರ್ಥಿಕ ಪರಿಸ್ಥಿತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ.
ಆದರೆ ಕಳೆದ ಕೆಲವು ವರ್ಷಗಳಿಂದ ಎಳೆ ಚುಕ್ಕಿ ರೋಗ, ಹಳದಿ ಎಲೆ ರೋಗ ಹಾಗೂ ತೆಂಗಿನ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಯೋಜಕ ಸನ್ನಿ ಡಿಸೋಜ ಅವರು ಮಾತನಾಡಿ, ಬಂಟ್ವಾಳದ ಮೂಲಕ ಹಾದುಹೋಗುವ 400 ಕೆ.ವಿ.ವಿದ್ಯುತ್ ಮಾರ್ಗವನ್ನು ಸ್ಥಳಾಂತರ ಮಾಡಬೇಕು, ರೈತರ ಭೂಮಿಯನ್ನು ಅತಿಕ್ರಮಣ ಮಾಡುವ ಬದಲು ಭೂಮಿಯ ಅಡಿಯಲ್ಲಿ ವಿದ್ಯುತ್ ಪೂರೈಕೆ ಮಾಡುವ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಲಿ ಎಂದು ತಿಳಿಸಿದರು.
ರೈತರ ಪ್ರಮುಖ ಬೇಡಿಕೆಗಳು ಯಾವುದು..?
1 ಅಡಿಕೆ ಹಾಗೂ ತೆಂಗಿನ ಆಮದಲ್ಲೂ ಸಂಪೂರ್ಣವಾಗಿ ನಿಷೇಧಿಸಬೇಕು.
2 .ಕಾರ್ಪೊರೇಟ್ ಕಂಪನಿಗಳ 14 ಲಕ್ಷ ಕೋಟಿ ಸಾಲ ಮನ್ನ ಮಾಡಿದ ಸರಕಾರ ಸರಕಾರದ ತಪ್ಪು ನೀತಿಯಿಂದಾಗಿ ರೈತರು ಸಾಲಗಾರರಾಗಿದ್ದಾರೆ ಆದ್ದರಿಂದ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು.
3 .ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ಟ ನಡೆಸುವರ ನಡೆಸುವ ರೈತರ ಈ ಮೇಲಿನ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು.
4 ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು.
5 ಧಾರ್ಮಿಕ ಸಂಘರ್ಷದಲ್ಲಿ ಮೃತಪಟ್ಟವರಿಗೆ ಸರಕಾರವು ನೀಡಿದ 25 ಲಕ್ಷ ಸಹಾಯಧನ ಪ್ರಕಾರ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ನೀಡಬೇಕು.
6 ಎಲೆ ಚುಕ್ಕಿ ರೋಗ ಹಾಗೂ ಹಳದಿ ಎಲೆ ರೋಗ ಭಾದಿತ ರೈತರಿಗೆ ಪ್ರತಿ ಎಕರೆಗೆ 25,00 ಸಹಾಯಧನವನ್ನು ನೀಡಬೇಕು.
7. ಬಂಟ್ವಾಳದ ಮೂಲಕ ಹಾದುಹೋಗುವ 400 ಕೆ ವಿ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸಬೇಕು.
ರೈತರ ಬೇಡಿಕೆಗಳೇನು…?
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಬೇಕು. ಸ್ವಾಮಿನಾಥನ್ ಶಿಫಾರಸುಗಳನ್ನು ಜಾರಿ ಮಾಡಬೇಕು.
ಕೃಷಿಕರು ಮತ್ತು ಕೃಷಿಕಾರ್ಮಿಕರಿಗೆ ಪಿಂಚಣಿ ನೀಡಬೇಕು. ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು.
ರೈತ ಹೋರಾಟಗಾರರ ಮೇಲಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು. ಈ ಲಖೀಮ್ ಪುರ ಖೇರಿ ಹಿಂಸಾಚಾರದಲ್ಲಿ ಬಲಿಪಶುಗಳಾದವರಿಗೆ ನ್ಯಾಯ ಸಿಗಬೇಕು. 2013ರ ಭೂಸ್ವಾಧೀನ ಕಾಯ್ದೆಯನ್ನು (ಭೂ ಸ್ವಾಧೀನದ ವೇಳೆ ಸರಿಯಾದ ಪರಿಹಾರ, ಪಾರದರ್ಶಕತೆ) ಪುನಃಸ್ಥಾಪಿಸಬೇಕು.
ವಿಶ್ವವಾಣಿಜ್ಯ ಸಂಸ್ಥೆಯಿಂದ ಭಾರತ ಹೊರಬರಬೇಕು.
ಹಿಂದಿನ ಹೋರಾಟಗಳಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು.
ರೈತ ಒಕ್ಕೂಟದ ಪ್ರಮುಖ ಸದಾನಂದ ಶೀತಲ್ ಉಪಸ್ಥಿತರಿದ್ದರು.