ಬಂಟ್ವಾಳ: ದೇಶದ ಮೂಲೆ ಮೂಲೆಗಳಲ್ಲೂ ಬಿಜೆಪಿ ಅಲೆ ಕಂಡುಬಂದಿದ್ದು, ಎಲ್ಲಾ ಚುನಾವಣೆಗಳಲ್ಲೂ ಜಯಗಳಿಸುತ್ತಿದೆ. ಬಂಟ್ವಾಳದಲ್ಲಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೇಶವರ ನೇತೃತ್ವದಲ್ಲಿ ಹಿಂದುಳಿಕ ವರ್ಗವನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಇಂದು(ನ. 10) ಬಿ.ಸಿ.ರೋಡು ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಎಸ್ಸಿ ಮೋರ್ಚಾ ಅಧ್ಯಕ್ಷ ಕೇಶವ ದೈಪಲ ಅವರ ನೇತೃತ್ವದಲ್ಲಿ ಎಲ್ಲಾ ಪದಾಧಿಕಾರಿಗಳನ್ನು ಶಾಸಕರು ಶಾಲು ಹಾಕಿ ಗೌರವಿಸಿದರು.
ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಕಾರ್ಯದರ್ಶಿ ಮಂಗಳಾ ಆಚಾರ್ಯ, ಎಸ್ಸಿ ಮೋರ್ಚಾ ಅಧ್ಯಕ್ಷ ವಿನಯನೇತ್ರ, ಪ್ರಧಾನ ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು, ಎಸ್ಸಿ ಮೋರ್ಚಾ ಕ್ಷೇತ್ರ ರಮೇಶ್ ಕುದ್ರೆಬೆಟ್ಟು, ಲೋಕೇಶ್ ನಾಟಿ ಮೊದಲಾದವರು ಉಪಸ್ಥಿತರಿದ್ದರು.

